ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರಾಗೃಹದಲ್ಲಿ ದರ್ಶನ್‌ ಭೇಟಿ ಮಾಡಿದ ಪ್ರೇಮ್‌, ರಕ್ಷಿತಾ

Published 29 ಜೂನ್ 2024, 20:08 IST
Last Updated 29 ಜೂನ್ 2024, 20:08 IST
ಅಕ್ಷರ ಗಾತ್ರ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಿರ್ದೇಶಕ ಪ್ರೇಮ್‌–ರಕ್ಷಿತಾ ದಂಪತಿ ಭೇಟಿ ಮಾಡಿದರು.

ಶನಿವಾರ ಮಧ್ಯಾಹ್ನ ಕಾರಾಗೃಹಕ್ಕೆ ಪತ್ನಿ ರಕ್ಷಿತಾ ಜತೆಗೆ ತೆರಳಿದ ಪ್ರೇಮ್, ಸ್ನೇಹಿತ ದರ್ಶನ್ ಜತೆ ಕೆಲವು ನಿಮಿಷ ಮಾತುಕತೆ ನಡೆಸಿದರು. ದರ್ಶನ್‌ ಭೇಟಿ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡುವಾಗ ದಂಪತಿ ಭಾವುಕರಾದರು.

ಪ್ರೇಮ್ ಮಾತನಾಡಿ, ‘ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಮಾತ ನಾಡುವುದು ಸರಿಯಲ್ಲ. ರೇಣುಕಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ‘ ಎಂದು ಹೇಳಿದರು.

ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಮತ್ತೊಂದೆಡೆ ವಕೀಲ ನಾರಾಯಣಸ್ವಾಮಿ ಶನಿವಾರ ಜೈಲಿನಲ್ಲಿರುವ ಪವಿತ್ರಾಗೌಡ ಭೇಟಿಯಾಗಿ ಜಾಮೀನು ಅರ್ಜಿ ಸಲ್ಲಿಸುವ ಕುರಿತು ಕೆಲ ಹೊತ್ತು ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ, ‘ಜೈಲಿನಲ್ಲಿ ವಿಚಾರಣಾಧೀನ ಕೈದಿಗಳು ಹೇಗೆ ಇರುತ್ತಾರೋ ಹಾಗೆಯೇ ಇವರೂ ಇದ್ದಾರೆ. ಅವರಿಗೆ ವಿಶೇಷ ಸೌಲಭ್ಯ
ಕಲ್ಪಿಸುತ್ತಿಲ್ಲ. ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಸಲ್ಲಿಸುವ ಬಗ್ಗೆ ಚಿಂತಿಸಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT