ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸನ್ನಡತೆ: 77 ಕೈದಿಗಳ ಬಿಡುಗಡೆ ಇಂದು

Published 8 ಜುಲೈ 2024, 20:55 IST
Last Updated 8 ಜುಲೈ 2024, 20:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಇರುವ 77 ಸಜಾ ಕೈದಿಗಳನ್ನು ಮಂಗಳವಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ.

ಜೈಲಾಧಿಕಾರಿಗಳು ಹಾಗೂ ಸರ್ಕಾರದ ಶಿಫಾರಸು ಮೇರೆಗೆ  ಸನ್ನಡತೆ ತೋರಿ 77  ಕೈದಿಗಳ ಅವಧಿಪೂರ್ವ ಬಿಡುಗಡೆಗೆ  ರಾಜ್ಯಪಾಲರು ಅನುಮತಿ ನೀಡಿದ್ದರು ಎಂದು ಗೊತ್ತಾಗಿದೆ.

ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ 34, ಮೈಸೂರು ಕೇಂದ್ರ ಕಾರಾಗೃಹದಿಂದ 7, ಬೆಳಗಾವಿ ಕೇಂದ್ರ ಕಾರಾಗೃಹದಿಂದ 5, ಕಲಬುರಗಿ ಕೇಂದ್ರ ಕಾರಾಗೃಹದಿಂದ ಒಂಬತ್ತು, ವಿಜಯಪುರ ಕೇಂದ್ರ ಕಾರಾಗೃಹದಿಂದ ಆರು, ಬಳ್ಳಾರಿ ಕೇಂದ್ರ ಕಾರಾಗೃಹದಿಂದ 10, ಧಾರವಾಡ ಜೈಲಿನಿಂದ ಆರು ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.

ಕೈದಿಗಳು ವಿವಿಧ ಕಾರಾಗೃಹಗಳಲ್ಲಿ ಹಲವು ವರ್ಷಗಳ ಕಾಲ ಕಾರಾಗೃಹ ವಾಸಿಗಳಾಗಿದ್ದರು. ಮನಃಪರಿವರ್ತನೆ ಹೊಂದಿ ಸಮಾಜದಲ್ಲಿ ಉತ್ತಮ ನಾಗರಿಕನಾಗಿ ಬದುಕಬೇಕೆಂಬ ಆಶಯದೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಅವರು ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT