ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಸಂವಹನ ಪ್ರಶಸ್ತಿ‌ ಪ್ರದಾನ

Published 3 ಆಗಸ್ಟ್ 2024, 15:50 IST
Last Updated 3 ಆಗಸ್ಟ್ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಸಂಪರ್ಕ ಕ್ಷೇತ್ರವು ಎಲ್ಲ ವಲಯಗಳಲ್ಲಿ ಅವಶ್ಯವಾಗಿದೆ. ಸಚಿವರು, ಜನಪ್ರತಿನಿಧಿಗಳು, ಸಂಸ್ಥೆಗಳ ಸಹಿತ ಎಲ್ಲರನ್ನೂ ಗುರುತಿಸಲು ಸಂವಹನ ಸಹಕಾರಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ರಾಜ್ಯ ಮಟ್ಟದ ಸಂವಹನ ಪ್ರಶಸ್ತಿ‌ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಾರ್ವಜನಿಕ ಸಂಪರ್ಕ ವಿಭಾಗಗಳನ್ನು ಚೆನ್ನಾಗಿ ಬಳಸಿಕೊಳ್ಳುವವರೇ ಯಶಸ್ವಿ ವ್ಯಕ್ತಿಗಳು ಎಂದು ಅಳೆಯುವ ಕಾಲದಲ್ಲಿ ನಾವಿದ್ದೇವೆ’ ಎಂದು ತಿಳಿಸಿದರು.

ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ ಶಾಸ್ತ್ರಿ, ಪಿಆರ್‌ಸಿಐ ಸಂಸ್ಥಾಪಕ ಜಯರಾಮ್, ಬೆಂಗಳೂರು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ವೇಣುಗೋಪಾಲ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್, ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಉಪಾಧ್ಯಕ್ಷೆ ಲತಾ ಟಿ.ಎಸ್., ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಬೆಂಗಳೂರು ವಲಯ ಅಧ್ಯಕ್ಷ  ರಾಮಕೃಷ್ಣ ಉಪಸ್ಥಿತರಿದ್ದರು. ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ಕ್ಷೇತ್ರದ ಹಲವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT