ಮಂಗಳವಾರ, ಸೆಪ್ಟೆಂಬರ್ 21, 2021
28 °C

ಎಎಪಿ: ಜು.30ಕ್ಕೆ ಶಿಕ್ಷಣ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಆಮ್‌ ಆದ್ಮಿ ಪಕ್ಷದ ವತಿಯಿಂದ ‘ಶಿಕ್ಷಣ ನಮ್ಮ ಹಕ್ಕು, ಶಿಕ್ಷಣ ನಿಮ್ಮ ಜವಾಬ್ದಾರಿ’ ಎಂಬ ಶೈಕ್ಷಣಿಕ ಸಮ್ಮೇಳನಗಳನ್ನು ಇದೇ 30ರಂದು ಸಂಜೆ 6 ಗಂಟೆಗೆ ಲ್ಯಾವೆಲ್ಲೆ ರಸ್ತೆಯ ರೋಟರಿ ಕ್ಲಬ್‌ನಲ್ಲಿ ಆಯೋಜಿಸಲಾಗಿದೆ’ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಪ್ರಸ್ತುತ ಶೈಕ್ಷಣಿಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ಹಾಗೂ ಅಗತ್ಯ ಬದಲಾವಣೆ ತರುವ ಸಂಬಂಧ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

‘ದೆಹಲಿ ಶಾಸಕಿ ಅತಿಶಿ ಮರ್ಲೆನಾ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ನ್ಯಾಷನಲ್ ಲಾ ಸ್ಕೂಲ್‌ನ ಪ್ರಾಧ್ಯಾಪಕ ಬಾಬು ಮ್ಯಾಥ್ಯು, ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಕರ್ನಾಟಕದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟಿಗೆ ಕಾರಣ ಮತ್ತು ಪರಿಹಾರ’ ಚರ್ಚೆಯಲ್ಲಿ ಕೆಎಎಂಎಸ್‌ನ ಮುಖ್ಯಸ್ಥ ಶಶಿಕುಮಾರ್, ಗುರು ಕಾಶಿನಾಥನ್, ಅಕ್ಷರ ಫೌಂಡೇಷನ್‌ನ ಪುಷ್ಪಾ ತಂತ್ರಿ, ಶಿಕ್ಷಕಿ ಉಷಾ ಮೋಹನ್, ದಕ್ಷ್‌ನ ಸೂರ್ಯ ಪ್ರಕಾಶ್ ಭಾಗವಹಿಸಲಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು