ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಗುಂಡಿ ಸಮಸ್ಯೆ: ಎಎಪಿಯಿಂದ ಸಹಾಯವಾಣಿ

Last Updated 22 ಅಕ್ಟೋಬರ್ 2021, 17:59 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿನ ಕಳಪೆ ರಸ್ತೆ ಕಾಮಗಾರಿಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂರಸ್ತೆ ಗುಂಡಿಗಳ ನಿರ್ಮೂಲನೆಗೆ ಆಮ್‌ ಆದ್ಮಿ ಪಕ್ಷವು (ಎಎಪಿ) ವಾಟ್ಸ್‌ಆ್ಯಪ್‌ ಸಹಾಯವಾಣಿ ಹಾಗೂಕಾರ್ಯಪಡೆ ಆರಂಭಿಸಿದೆ’ ಎಂದುಎಎಪಿ ಮುಖಂಡ ಜಗದೀಶ್‌ ಕೆ.ಎನ್‌.ಮಹಾದೇವ್‌ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರದಿಂದ ನಗರದ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳು ಬಿದ್ದಿವೆ. ಇವುಗಳಿಂದ ಅನೇಕ ವಾಹನ ಸವಾರರು ಗಾಯಗೊಂಡಿದ್ದಾರೆ ಹಾಗೂ ಕೆಲವರು ಜೀವ ಕಳೆದುಕೊಂಡಿದ್ದಾರೆ. ಹಾಗಾಗಿ, ರಸ್ತೆ ಗುಂಡಿಗಳ ನಿರ್ಮೂಲನೆಗಾಗಿ ಪ‍ಕ್ಷವು ವಾಟ್ಸ್‌ಆ್ಯಪ್‌ ಸಹಾಯವಾಣಿ ಆರಂಭಿಸಿದೆ’ ಎಂದರು.

‘ನಗರದಲ್ಲಿ ಕಳಪೆರಸ್ತೆ ಕಾಮಗಾರಿ ನಡೆದಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ, ನಮ್ಮ ಸಹಾಯವಾಣಿಗೆ ( 9513319676) ಸಂದೇಶ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಅವುಗಳ ಬಗ್ಗೆ ಪರಾಮರ್ಶಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲಿದೆ’ ಎಂದು ವಿವರಿಸಿದರು.

ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್‌ ದಾಸರಿ,‘ರಸ್ತೆ ಗುಂಡಿ ಹಬ್ಬ ಎಂಬ ವಿನೂತನ ಚಳವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದ್ದೇವೆ. ಈಗ ಸಹಾಯವಾಣಿ ಮೂಲಕ ಮತ್ತೊಂದು ಹಂತದ ಹೋರಾಟ ಆರಂಭಿಸುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT