ಶುಕ್ರವಾರ, ನವೆಂಬರ್ 15, 2019
27 °C

ಕ್ಷತ್ರಿಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

Published:
Updated:

ಬೆಂಗಳೂರು: ಕ್ಷತ್ರಿಯ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಬೇಕೆಂದು ಕರ್ನಾಟಕ ರಾಜು ಕ್ಷತ್ರಿಯ ಸಂಘ ಒತ್ತಾಯಿಸಿದೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಲ್‌.ಕೆ.ರಾಜು,‘ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಮಂದಿ ಇರುವ ಕ್ಷತ್ರಿಯ ಸಮುದಾಯ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ನಿರ್ಲಕ್ಷಿತ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆಯಾಗಬೇಕಿದೆ’ ಎಂದರು.

‘ಇತ್ತೀಚೆಗೆ ನಡೆದ ಸಮುದಾಯದ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಿಗಮ ಸ್ಥಾಪಿಸುವ ಭರವಸೆ ನೀಡಿದ್ದರು. ಈಗ ಅವರ ನೇತೃತ್ವದಲ್ಲೇ ಸರ್ಕಾರವಿದ್ದು, ನಿಗಮ ಸ್ಥಾಪಿಸಿ ಭರವಸೆ ಪೂರ್ಣಗೊಳಿಸಬೇಕು’ ಎಂದು ಮನವಿ ಮಾಡಿದರು.

 

 

ಪ್ರತಿಕ್ರಿಯಿಸಿ (+)