ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಸ್ತೀಕ್‌ ಹೆಚ್ಚಿಸಲು ಅರ್ಚಕರ ಮನವಿ

Published 27 ಜೂನ್ 2024, 15:44 IST
Last Updated 27 ಜೂನ್ 2024, 15:44 IST
ಅಕ್ಷರ ಗಾತ್ರ

ಬೆಂಗಳೂರು: ಮುಜರಾಯಿ ಇಲಾಖೆಯ ಅಡಿಯಲ್ಲಿ ಇರುವ ‘ಸಿ’ ವರ್ಗದ ದೇವಾಲಯಗಳ ತಸ್ತೀಕ್‌ ಅನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದೆ.

ಗ್ರಾಮೀಣ ಪ್ರದೇಶದಲ್ಲಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಪೂಜಾ ಸಾಮಗ್ರಿಗಳ ವೆಚ್ಚ ಮತ್ತು ಅರ್ಚಕರ ಗೌರವಧನ ಸೇರಿ ತಸ್ತೀಕ್‌ ₹ 5000 ನೀಡಲಾಗುತ್ತಿದೆ. ಅದನ್ನು ಹೆಚ್ಚಿಸಬೇಕು. ‘ಎ’ ಮತ್ತು ‘ಬಿ’ ವರ್ಗದ ಅರ್ಚಕರ ಮತ್ತು ದೇವಸ್ಥಾನದ ನೌಕರರ ವೇತನಗಳು ಅದರ ಒಟ್ಟು ವಾರ್ಷಿಕ ವರಮಾನದ ಶೇ 35 ಮೀರಬಾರದು ಎಂಬ ಆದೇಶ ಇದೆ. ಅದನ್ನು ಪರಿಷ್ಕರಿಸಿ ಶೇ 50ರವರೆಗೆ ಹೆಚ್ಚಿಸಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ದೇವಸ್ಥಾನಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ಮಾಡುವ ಚಿಂತನೆಯನ್ನು ಸರ್ಕಾರ ಕೈಬಿಡಬೇಕು. ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿಯೇ ದೇವಾಲಯಗಳನ್ನು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಒಕ್ಕೂಟದ ಪ್ರಧಾನ ಸಲಹೆಗಾರ ರಾಧಾಕೃಷ್ಣ ಕೆ.ಇ., ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಎನ್‌. ದೀಕ್ಷಿತ್‌ ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT