ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ, ರಾಷ್ಟ್ರಪತಿ ಆಗಾಗ್ಗೆ ಭೇಟಿ ನೀಡಲಿ: ಹೈಕೋರ್ಟ್‌

ರಸ್ತೆ ದುರವಸ್ತೆ: ಬಿಡಿಎ ಕಾರ್ಯವೈಖರಿಗೆ ಹೈಕೋರ್ಟ್‌ ತರಾಟೆ
Last Updated 23 ಜೂನ್ 2022, 18:26 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ಪ್ರಧಾನಿ ಮತ್ತು ರಾಷ್ಟ್ರಪತಿ ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಿರಬೇಕು’ ಎಂದು ಕುಟುಕಿರುವ ಹೈಕೋರ್ಟ್‌, ಈ ಸಂಬಂಧ ಪ್ರಕರಣವೊಂದರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಚಾಟಿ ಬೀಸಿದೆ.

‘ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ಕೆಲ ನಿವೇಶನಗಳಿಗೆ ಒಳಚರಂಡಿ, ಕುಡಿಯುವ ನೀರಿನ ಸಂಪರ್ಕ ಮತ್ತು ರಸ್ತೆ ಸೌಲಭ್ಯ ಕಲ್ಪಿಸಿಲ್ಲ’ ಎಂದು ಆಕ್ಷೇಪಿಸಿ ಪಿ.ಮಂಜುಳಾ ಮತ್ತು ಶಾರದಮ್ಮ ಎಂಬುವರುಬಿಡಿಎ ಅಧಿಕಾರಿಗಳ ವಿರುದ್ಧ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನುನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ ₹ 23 ಕೋಟಿ ಖರ್ಚು ಮಾಡಿ ನಗರದ ಗುಂಡಿಗಳನ್ನು ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು‘ ಎಂದು ನ್ಯಾಯಪೀಠ ಬಿಡಿಎ ಕಾರ್ಯವೈಖರಿಯನ್ನು
ಕುಟುಕಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT