ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸಿ ಸುಳ್ಳು ಹೇಳುತ್ತಿರುವ ಪ್ರಧಾನಿ: ಮೀನಾಕ್ಷಿ ಬಾಳಿ

Published 24 ಏಪ್ರಿಲ್ 2024, 16:05 IST
Last Updated 24 ಏಪ್ರಿಲ್ 2024, 16:05 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಸಂಪತ್ತನ್ನು ಕಾಂಗ್ರೆಸ್‌ ಮುಸ್ಲಿಮರಿಗೆ ಹಂಚುವುದಾಗಿ ಘೋಷಣೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹಸಿ ಸುಳ್ಳು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರವನ್ನು ಕಸಿದುಕೊಳ್ಳುತ್ತಾರೆ ಎಂದು ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಬೇಸರ ವ್ಯಕ್ತಪಡಿಸಿದೆ.

ದೇಶದ ಪ್ರಧಾನ ಮಂತ್ರಿ ಈ ರೀತಿ ದ್ವೇಷ ಬಿತ್ತುವ ಭಾಷಣ ಮಾಡುವುದು ಅಕ್ಷಮ್ಯ. ಬಹುತೇಕ ಎಲ್ಲ ಧರ್ಮಿಯ ಮಹಿಳೆಯರು ಮಂಗಳಸೂತ್ರ ಕುರಿತು ಪವಿತ್ರ ಭಾವನೆಗಳನ್ನು ಇಟ್ಟುಕೊಂಡಿರುವಾಗ ರಾಜಕೀಯ ಸ್ವಾರ್ಥಕ್ಕಾಗಿ ಮಹಿಳೆಯರನ್ನು ಪ್ರಚೋದಿಸುತ್ತಿದ್ದಾರೆ. ನೀಚತನ ಮೆರೆಯಲು ಮಹಿಳೆಯರ ಹೆಣ, ತಾಳಿಯಂತಹ ಅಂಶಗಳೇ ಬೇಕಾ ಎಂದು ಸಂಘಟನೆಯ ಅಧ್ಯಕ್ಷೆ ಮೀನಾಕ್ಷಿ ಬಾಳಿ, ಪ್ರಧಾನ ಕಾರ್ಯದರ್ಶಿ ದೇವಿ ಪ್ರಶ್ನಿಸಿದ್ದಾರೆ.

ಚುನಾವಣಾ ಆಯೋಗ ಇಂಥ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಬೇಕು. ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT