ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತೆಗೆ ಆದ್ಯತೆ: ಆಯುಕ್ತರಿಗೆ ಸೂಚನೆ: ಬೈರತಿ ಬಸವರಾಜ

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ನೇತೃತ್ವದಲ್ಲಿ ಮೊದಲ ಸಭೆ
Last Updated 16 ಆಗಸ್ಟ್ 2021, 21:22 IST
ಅಕ್ಷರ ಗಾತ್ರ

ಬೆಂಗಳೂರು: ‘ಎಲ್ಲ ಮಹಾನಗರಪಾಲಿಕೆಗಳ ಆಯುಕ್ತರು ಪ್ರತಿ ದಿನ ಒಂದು ಗಂಟೆ ತಮ್ಮ ನಗರದಲ್ಲಿ ಸಂಚರಿಸಿ, ಸ್ವಚ್ಚತಾ ಕಾರ್ಯಗಳ ಪರಿಶೀಲನೆ ನಡೆಸಬೇಕು. ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು’ ಎಂದು ಮಹಾನಗರಪಾಲಿಕೆಗಳ ಆಯುಕ್ತರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಮತ್ತೆ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಆಯುಕ್ತರ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸೋಮವಾರ ಅವರು ಸಭೆ ನಡೆಸಿದರು.

‘ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಯಡಿ ಆದಷ್ಟು ಬೇಗ ಕಾಮಗಾರಿಗಳನ್ನು ಕೈಗೆತ್ತಿಕೊಂಡು, ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಬೀದಿದೀಪಗಳ ದುರಸ್ತಿ ಮತ್ತು ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಬೇಕು. ಪಾಲಿಕೆ ವ್ಯಾಪ್ತಿಯ ಖಾಸಗಿ ಸ್ವತ್ತುಗಳ ಅಸ್ತಿ ತೆರಿಗೆ ಸರಿಯಾಗಿ ಸಂದಾಯ ಆಗುವ ರೀತಿಯಲ್ಲಿ ನೋಡಿಕೊಳ್ಳಬೇಕು. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಿ ವಸೂಲಿಗೆ ಮುಂದಾಗಬೇಕು. ಯಾವುದೇ ರೀತಿಯ ಒತ್ತಡಕ್ಕೆ ಮಣಿಯಬಾರದು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಸಾರ್ವಜನಿಕರಿಂದ ಬರುವ ದೂರುಗಳು, ಕುಂದುಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸಬೇಕು. ದೂರುಗಳು ವಿಧಾನಸೌಧದ ಸಚಿವರ ಕಚೇರಿಯವರೆಗೆ ಬರದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು’ ಎಂದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷ್‌, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ. ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಎಂ.ಟಿ. ರೇಜು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT