‘ಸ್ನೇಹಿತ, ಬೈಕ್ ಚಲಾಯಿಸುತ್ತಿದ್ದರು. ಹಿಂಬದಿಯಲ್ಲಿ ಆಶೀಸ್ ಕುಳಿತಿದ್ದರು. ವಿದ್ಯಾನಗರ ವೃತ್ತದ ಸರ್ವೀಸ್ ರಸ್ತೆಯಲ್ಲಿ ರಾತ್ರಿ 8.15 ಗಂಟೆ ಸುಮಾರಿಗೆ ಬೈಕ್ ಹೊರಟಿತ್ತು. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಖಾಸಗಿ ಬಸ್, ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ಉರುಳಿಬಿದ್ದ ಆಶೀಸ್ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.