ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮೆಜೆಸ್ಟಿಕ್‌ ಬಳಿ ಬೆಂಕಿ ಅವಘಡದಲ್ಲಿ ಖಾಸಗಿ ಬಸ್‌ ಭಸ್ಮ

Published 17 ಏಪ್ರಿಲ್ 2024, 15:42 IST
Last Updated 17 ಏಪ್ರಿಲ್ 2024, 15:42 IST
ಅಕ್ಷರ ಗಾತ್ರ

ಬೆಂಗಳೂರು: ಮೆಜೆಸ್ಟಿಕ್‌ ಬಳಿಯ ಅಮರ್‌ ಹೋಟೆಲ್‌ ಬಳಿ ಬುಧವಾರ ರಾತ್ರಿ ನಿಲುಗಡೆ ಮಾಡಲಾಗಿದ್ದ ಖಾಸಗಿ ಬಸ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ ಬಹುತೇಕ ಭಸ್ಮವಾಗಿದೆ.

ಎಸ್‌.ಜೆ.ಕಂಫರ್ಟ್‌ ಹೆಸರಿನ ಖಾಸಗಿ ಬಸ್‌ ಅನ್ನು ನಿಲುಗಡೆ ಮಾಡಲಾಗಿತ್ತು. ಚಾಲಕ, ನಿರ್ವಾಹಕ ಹಾಗೂ ಕ್ಲೀನರ್‌ ಹೊರಹೋಗಿದ್ದರು. ಬಸ್‌ನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಅದೇ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳದಲ್ಲಿದ್ದವರು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಹಾನಿ ಆಗುವುದನ್ನು ತಡೆದರು. ಎರಡು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿದವು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT