ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲೆಗಳಿಂದ ಸುಲಿಗೆ: ವಿದ್ಯಾರ್ಥಿಗಳ ಪೋಷಕರಿಂದ ಪ್ರತಿಭಟನೆ

ವಿದ್ಯಾರ್ಥಿಗಳ ಪೋಷಕರಿಂದ ಪ್ರತಿಭಟನೆ
Last Updated 2 ಅಕ್ಟೋಬರ್ 2021, 18:45 IST
ಅಕ್ಷರ ಗಾತ್ರ

ಬೆಂಗಳೂರು: ‘ಖಾಸಗಿ ಶಾಲೆಗಳು ಶುಲ್ಕದ ಹೆಸರಿನಲ್ಲಿ ಸುಲಿಗೆ ಮಾಡುತ್ತಿವೆ’ ಎಂದು ಆರೋಪಿಸಿ ವಿದ್ಯಾರ್ಥಿಗಳ ಪೋಷಕರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

‘ರಾಜ್ಯ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆ’ ಹಾಗೂ ‘ವಾಯ್ಸ್ ಆಫ್ ಪೇರೆಂಟ್ಸ್’ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆನಂದರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಎದುರು ಸೇರಿದ್ದ ಪೋಷಕರು, ಘೋಷಣಾ ಫಲಕ ಪ್ರದರ್ಶಿಸಿದರು. ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಆಕ್ರೋಶ ಹೊರಹಾಕಿದರು.

‘ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಯಂತ್ರಣಕ್ಕೆ ಸಮಿತಿ ರಚಿಸಬೇಕು’ ಎಂದು ಪೋಷಕರು ಒತ್ತಾಯಿಸಿದರು.

'2020–21ನೇ ಶೈಕ್ಷಣಿಕ ಸಾಲಿನಲ್ಲಿ ಶೇ 15ರಷ್ಟು ಶುಲ್ಕ ಕಡಿತ ಮಾಡುವಂತೆ ಹೈಕೋರ್ಟ್ ಈಗಾಗಲೇ ಹೇಳಿದೆ. ಆದರೆ, 2021-22ನೇ ಶೈಕ್ಷಣಿಕ ಸಾಲಿನಲ್ಲಿ ಎಷ್ಟು ಶುಲ್ಕ ಪಾವತಿಸಬೇಕೆಂಬ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ, ಖಾಸಗಿ ಶಾಲೆಯವರು ಶುಲ್ಕ ಹೆಚ್ಚಳ ಮಾಡಿ ಪೋಷಕರ ಸುಲಿಗೆಗೆ ಇಳಿದಿದ್ದಾರೆ’ ಎಂದು ಕಿಡಿಕಾರಿದರು.

ಶಿಕ್ಷಣ ತಜ್ಞ ವಿ.‍ಪಿ. ನಿರಂಜನಾರಾಧ್ಯ, ‘ಸರ್ಕಾರ ಶುಲ್ಕ ನಿಯಂತ್ರಣ ಸಮಿತಿ ರಚಿಸಬೇಕು. ಇಲ್ಲದಿದ್ದರೆ, ಪೋಷಕರ ಕೆಂಗಣ್ಣಿಗೆ ಸರ್ಕಾರ ಗುರಿಯಾಗುತ್ತದೆ’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT