ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬಾರಿ ಶುಲ್ಕ ಪಡೆದರೆ ಕ್ರಮ: ಎಂಜಿನಿಯರ್‌ ಕಾಲೇಜುಗಳಿಗೆ ಎಚ್ಚರಿಕೆ

Last Updated 21 ಡಿಸೆಂಬರ್ 2020, 20:06 IST
ಅಕ್ಷರ ಗಾತ್ರ

ಬೆಂಗಳೂರು: ನಿಗದಿಗಿಂತ ಹೆಚ್ಚು ಶುಲ್ಕ ಪಡೆದ ಅಥವಾ ಹೆಚ್ಚು ಶುಲ್ಕ ನೀಡಲು ಒತ್ತಾಯಿಸಿದ ಬಗ್ಗೆ ವಿದ್ಯಾರ್ಥಿಗಳಿಂದ ದೂರುಗಳು ಬಂದರೆ ಸಂಬಂಧಿಸಿದ ಎಂಜಿನಿಯರಿಂಗ್‌ ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ದಾಖಲಾತಿ ಮೇಲ್ವಿಚಾರಣಾ ಸಮಿತಿ ಎಚ್ಚರಿಕೆ ನೀಡಿದೆ.

ವೃತ್ತಿಪರ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಅಥವಾ ದಾಖಲಾತಿ ಕುರಿತು ಮೇಲ್ವಿಚಾರಣೆ ನಡೆಸಲು ಈ ಸಮಿತಿ ರಚಿಸಲಾಗಿದೆ. ಹೆಚ್ಚು ಶುಲ್ಕ ಪಡೆಯಬಾರದು ಎಂಬ ಸುತ್ತೋಲೆಯನ್ನು ಸಮಿತಿಯು ಎಲ್ಲ ವೃತ್ತಿಪರ ಕಾಲೇಜಿಗೆ ಕಳುಹಿಸಿದ್ದು, ಈ ಕುರಿತು ಎಚ್ಚರಿಕೆಯನ್ನೂ ನೀಡಿದೆ.

‘ಶುಲ್ಕಕ್ಕೆ ಸಂಬಂಧಿಸಿದಂತೆ ಕಾಲೇಜುಗಳು ಸರ್ಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದಕ್ಕೆ ಬದ್ಧವಾಗಿರಬೇಕು. ನಿಯಮ ಮೀರಿ ಶುಲ್ಕ ವಸೂಲಿ ಮಾಡಿದರೆ ಇದು ಒಪ್ಪಂದದ ಉಲ್ಲಂಘನೆಯಾಗುತ್ತದೆ. ಅಲ್ಲದೆ, ಕರ್ನಾಟಕ ಶಿಕ್ಷಣ ಸಂಸ್ಥೆಗಳ (ಕ್ಯಾಪಿಟೇಷನ್‌ ಶುಲ್ಕ ನಿಷೇಧ) ಕಾಯ್ದೆ 1984ರ ಉಲ್ಲಂಘನೆಯೂ ಆಗುತ್ತದೆ’ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

‘ಸಿಇಟಿ ಕೋಟಾ ಮತ್ತು ಖಾಸಗಿ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗಳಿಂದಲೂ ಹೆಚ್ಚು ಶುಲ್ಕಕ್ಕೆ ಕೆಲವು ಕಾಲೇಜುಗಳು ಬೇಡಿಕೆ ಇಡುತ್ತಿರುವ ಕುರಿತು ದೂರುಗಳು ಬಂದಿವೆ. ಅಲ್ಪಸಂಖ್ಯಾತ ಮತ್ತು ಅಲ್ಪಸಂಖ್ಯಾತವಲ್ಲದ ಖಾಸಗಿ ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳು ಕೂಡ ಸರ್ಕಾರಿ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗಳಿಂದಲೂ ನಿಗದಿಗಿಂತ ಹೆಚ್ಚು ಶುಲ್ಕ ಪಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಆರೋಪ ಸಾಬೀತಾದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದೂ ಸಮಿತಿ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT