ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್

ತುರ್ತು ಚಿಕಿತ್ಸೆಗಳು ಲಭ್ಯ l ಜನತಾ ಕರ್ಫ್ಯೂಗೆ ಬೆಂಬಲ
Last Updated 21 ಮಾರ್ಚ್ 2020, 20:58 IST
ಅಕ್ಷರ ಗಾತ್ರ

ಬೆಂಗಳೂರು: ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳು (ಒಪಿಡಿ) ಭಾನುವಾರ ಬಂದ್ ಆಗಲಿದ್ದು, ತುರ್ತು ಸೇವೆಗಳು ಮಾತ್ರ ಸಿಗಲಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಂದಿನಂತೆ ವೈದ್ಯಕೀಯ ಸೇವೆಗಳು ದೊರೆಯಲಿವೆ.

ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆ ಅನುಸಾರ ರಜಾ ದಿನವಾದ ಭಾನುವಾರವೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಶುಶ್ರೂಷಕರು ಹಾಗೂ ಸಿಬ್ಬಂದಿ ಎಂದಿನಂತೆ ಕಾರ್ಯನಿರ್ವಹಿಸಲಿದ್ದಾರೆ. ಹಾಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯಕೀಯ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ.ಆಂಬುಲೆನ್ಸ್‌ ಸೇವೆ ಯಥಾಪ್ರಕಾರ ಇರಲಿದೆ.

ಬಹುತೇಕ ಎಲ್ಲ ಖಾಸಗಿ ಔಷಧಿ ಮಳಿಗೆಗಳು ಕೂಡ ಮುಚ್ಚಿರಲಿವೆ. ಸರ್ಕಾರಿ ಆಸ್ಪತ್ರೆಗಳಿಗೆ ಹೊಂದಿಕೊಂಡು ಇರುವ ಔಷಧಿ ಮಳಿಗೆಗಳು ತೆರೆದಿರಲಿವೆ.ಜನತಾ ಕರ್ಫ್ಯೂಗೆಭಾರತೀಯ ವೈದ್ಯಕೀಯ ಸಂಘ (ಐಎಂಎ) ಹಾಗೂಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್‍ಗಳ ಅಸೋಸಿಯೇಷನ್ (ಫಾನಾ) ಬೆಂಬಲ ವ್ಯಕ್ತಪಡಿಸಿವೆ.

‘ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಉಂಟಾದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಅಧಿಕ. ತುರ್ತಾಗಿ ಚಿಕಿತ್ಸೆ ಅಗತ್ಯ ಇರುವವರನ್ನು ಮಾತ್ರ ದಾಖಲಿಸಿಕೊಳ್ಳುವಂತೆ ಸೂಚಿಸಿದ್ದೇವೆ. ಭಾನುವಾರ ಒಪಿಡಿ ಮುಚ್ಚಲು ಸೂಚಿಸಲಾಗಿದೆ. ತುರ್ತು ಚಿಕಿತ್ಸೆಗಳು ದೊರೆಯಲಿವೆ. ಸೋಂಕು ಶಂಕಿತರಿಗೆ ಪ್ರಥಮ ಆದ್ಯತಾ ಆಸ್ಪತ್ರೆಗಳಿಗೆ ತೆರಳುವಂತೆ ಸೂಚಿಸಲಾಗುತ್ತದೆ’ ಎಂದುಐಎಂಎ ರಾಜ್ಯ ಕಾರ್ಯದರ್ಶಿ ಡಾ. ಶ್ರೀನಿವಾಸ್ ತಿಳಿಸಿದರು.

‘ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿಡುವ ಬದಲು ಪ್ರತ್ಯೇಕವಾಗಿ ಒಂದು ಆಸ್ಪತ್ರೆಯನ್ನು ಗುರುತಿಸುವುದು ಉತ್ತಮ. ಅಲ್ಲಿ ಕೆಲಸ ಮಾಡುವ ವೈದ್ಯರು ಬೇರೆ ವಿಭಾಗದಲ್ಲಿ ಕೆಲಸ ಮಾಡಬಾರದು.ಈವ್ಯವಸ್ಥೆಯನ್ನು ಕೂಡಲೇ ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೋರಲಾಗಿದೆ, ಎಂದು ಅವರು ಮಾಹಿತಿ ನೀಡಿದರು.

ಕೆಲ ಸಿಬ್ಬಂದಿಗೆ ರಜೆ:ಫಾನಾ ಅಧ್ಯಕ್ಷಡಾ.ಆರ್.ರವೀಂದ್ರ, ‘ಒಳರೋಗಿಗಳಿಗೆ ಎಂದಿನಂತೆ ಚಿಕಿತ್ಸೆಯನ್ನು ಒದಗಿಸಲಾಗುತ್ತದೆ.ತೀರಾ ಅಗತ್ಯವಲ್ಲವೆಂದು ಪರಿಗಣಿಸಲ್ಪಟ್ಟ ಸೇವಾ ಸಿಬ್ಬಂದಿಗೆ ರಜೆ ನೀಡಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT