ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೌತಿಕ ತರಗತಿ ಸ್ಥಗಿತ: ಖಾಸಗಿ ಶಾಲೆಗಳ ಅಸಮಾಧಾನ

Last Updated 2 ಏಪ್ರಿಲ್ 2021, 19:28 IST
ಅಕ್ಷರ ಗಾತ್ರ

ಬೆಂಗಳೂರು: 6ನೇ ತರಗತಿಯಿಂದ 9ರವರೆಗೆ ಭೌತಿಕ ತರಗತಿ ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಪರೀಕ್ಷೆ ನಡೆಸಲಾದರೂ ಅವಕಾಶ ಕೊಡಿ ಎಂದು ಅದು ಕೋರಿದೆ.

‘ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅತ್ಯಂತ ಸುರಕ್ಷಿತ ರೀತಿಯಲ್ಲಿ ಬೋಧನಾ ಕಾರ್ಯ ನಡೆಯುತ್ತಿದೆ. ಶಾಲೆಗಳಲ್ಲಿ ಸೋಂಕು ತೀವ್ರವಾಗಿ ಹರಡಿಲ್ಲ. ಈ ಸಂದರ್ಭದಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿರುವುದು ಸರಿಯಲ್ಲ’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಹೇಳಿದ್ದಾರೆ.

‘ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಜೂನ್‌ನಿಂದಲೇ ಆನ್‌ಲೈನ್‌ ಬೋಧನೆ ಪ್ರಾರಂಭವಾಗಿದೆ. ಶೈಕ್ಷಣಿಕ ವರ್ಷದ ಪಠ್ಯಕ್ರಮ ಕೂಡ ಮುಗಿದಿದೆ. ಹಲವು ಶಾಲೆಗಳಲ್ಲಿ ಪುನರಾವರ್ತನೆ ಕಾರ್ಯವೂ ಮುಕ್ತಾಯಗೊಂಡಿದೆ. ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭೌತಿಕ ಪರೀಕ್ಷೆ ನಡೆಸುವುದಕ್ಕಾದರೂ ಸರ್ಕಾರ ಅನುಮತಿ ನೀಡಬೇಕು’ ಎಂದು ಅವರು ಕೋರಿದ್ದಾರೆ.

‘ಕಳೆದ ವರ್ಷವೂ ಪರೀಕ್ಷೆ ಇಲ್ಲ. ಪರೀಕ್ಷೆ ಪ್ರಕ್ರಿಯೆ ಇನ್ನೇನು ಪ್ರಾರಂಭ ಮಾಡಬೇಕು ಎಂಬ ಹಂತದಲ್ಲಿ ತರಗತಿಗಳನ್ನು ಏಕಾಏಕಿ ಸ್ಥಗಿತಗೊಳಿಸಲಾಗಿದೆ. ಮಕ್ಕಳ ಮೌಲ್ಯಮಾಪನ ಪ್ರಕ್ರಿಯೆ ಸರಿಯಾಗಿ ಆಗದಿದ್ದರೆ ಶೈಕ್ಷಣಿಕ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಖಾಸಗಿ ಶಾಲೆಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಸಚಿವರು ಮುಖ್ಯಮಂತ್ರಿಯವರ ಮನವೊಲಿಸಿ, ಭೌತಿಕ ತರಗತಿ ಸ್ಥಗಿತಗೊಳಿಸದಂತೆ ಕೋರಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT