ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ರಸ್ತೆಬದಿಯಲ್ಲಿ ನರಳಾಡುತ್ತಿದ್ದ ವ್ಯಕ್ತಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಆಸ್ಪತ್ರೆಗೆ ದಾಖಲಿಸಲು ನೆರವಾದರು.

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ, ಸದಾಶಿವನಗರದ ರಸ್ತೆ ಬದಿಯಲ್ಲಿ ನರಳಾಡುತ್ತಿದ್ದರು. ಅದೇ ಮಾರ್ಗವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರಿನಲ್ಲಿ ತೆರಳುತ್ತಿದ್ದರು. ರಸ್ತೆಬದಿಯಲ್ಲಿ ಒದ್ದಾಡುತ್ತಿದ್ದ ಗಾಯಾಳುವನ್ನು ಕಂಡು ತಕ್ಷಣ ಚಾಲಕನಿಗೆ ಕಾರು ನಿಲ್ಲಿಸುವಂತೆ ಸಚಿವರು ಸೂಚಿಸಿದರು. ಬಳಿಕ ಆಂಬುಲೆನ್ಸ್ಗೆ ಕಾಯದೇ ತಮ್ಮ ಕಾರಿನಲ್ಲಿಯೇ ಗಾಯಾಳುವನ್ನು ಕೂರಿಸಿಕೊಂಡು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

‘ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಚರ್ಚಿಸಿ, ಗಾಯಗೊಂಡ ವ್ಯಕ್ತಿಗೆ ತುರ್ತು ಚಿಕಿತ್ಸೆ ನೀಡುವಂತೆ ಸಚಿವರು ಮನವಿ ಮಾಡಿಕೊಂಡಿದರು. ತಕ್ಷಣವೇ ಗಾಯಾಳುವಿಗೆ ಚಿಕಿತ್ಸೆ ನೀಡಲಾಯಿತು. ಅವರು ಚೇತರಿಸಿಕೊಂಡಿದ್ದಾರೆ’ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.