ಬೆಂಗಳೂರು | ನಿರ್ಮಾಪಕನ ಕೊಲೆಗೆ ಸಂಚು: ರೌಡಿ ಕರಿಯಾ ಬಂಧನ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರೂ ಆದ ಸಿನಿಮಾ ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು ರೂಪಿಸಿದ್ದ ಆರೋಪದಡಿ ರೌಡಿ ರಾಜೇಶ್ ಅಲಿಯಾಸ್ ಕರಿಯಾನನ್ನು (40) ಕೆಂಪೇಗೌಡ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಕರಿಯಾ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು. ಕೆಲ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದ ಈತ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಮೈಸೂರಿನಲ್ಲಿ ಅಡಗಿದ್ದ ಈತನನ್ನು ಬಂಧಿಸಿ ನಗರಕ್ಕೆ ಕರೆತರಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಬಂಧಿತ ಕರಿಯಾ, ರೌಡಿಗಳಾದ ಪರಂದಾಮ ಹಾಗೂ ಬಾಂಬೆ ರವಿ ಸಹಚರ. ಕೊಲೆ, ದರೋಡೆ ಹಾಗೂ ಕೊಲೆಗೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ. ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು ರೂಪಿಸಿದ್ದ. ಕೆಂಪೇಗೌಡ ನಗರ, ಚಾಮರಾಜಪೇಟೆ, ಬಸವನಗುಡಿ, ಹನುಮಂತನಗರ, ಜಯನಗರ ಠಾಣೆ ವ್ಯಾಪ್ತಿಯಲ್ಲಿ ಕರಿಯಾ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.