ಭಾನುವಾರ, ಮೇ 29, 2022
23 °C

ಜ. 31ರವರೆಗೆ ನಿಷೇಧಾಜ್ಞೆ ಮುಂದುವರಿಕೆ- ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಹರಡುವಿಕೆ ತಡೆಗಾಗಿ ನಗರದಲ್ಲಿ ಸೆಕ್ಷನ್ 144ರಡಿ ಜಾರಿಗೊಳಿಸಲಾಗಿರುವ ನಿಷೇಧಾಜ್ಞೆಯನ್ನು ಜ. 31ರವರೆಗೆ ವಿಸ್ತರಣೆ ಮಾಡಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೋಮವಾರ ಆದೇಶ ಹೊರಡಿಸಿದ್ದಾರೆ.

‘ರಾಜ್ಯ ಸರ್ಕಾರದ ನಿರ್ದೇಶನಗಳ ಅನ್ವಯ ಈ ಆದೇಶ ಹೊರಡಿಸಲಾಗಿದೆ. ಸರ್ಕಾರ ರೂಪಿಸಿರುವ ಎಲ್ಲ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಆದೇಶದಲ್ಲಿ ಎಚ್ಚರಿಸಿದ್ದಾರೆ

‘ಐದು ಜನಕ್ಕಿಂತ ಹೆಚ್ಚು ಮಂದಿ ಗುಂಪು ಸೇರಬಾರದು. ರ‍್ಯಾಲಿ, ಧರಣಿ, ಮದುವೆ ಸಮಾರಂಭ ಆಯೋಜನೆಗೂ ನಿಯಮ ಅನ್ವಯವಾಗಲಿದೆ’ ಎಂದೂ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು