ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಸಮನ್ವಯಕ್ಕೆ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂಬುದು ಸೇರಿದಂತೆ 13 ಬೇಡಿಕೆಗಳಿರುವ ಮನವಿ ಪತ್ರವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮುಖ್ಯಮಂತ್ರಿಗೆ ಸಲ್ಲಿಸಿದ್ದಾರೆ.

2026-27ನೇ ಸಾಲಿನ ಬಜೆಟ್ನಲ್ಲಿ ಈ ಎಲ್ಲ ಯೋಜನೆಗಳನ್ನು ಸೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ದಿನೇಶ್, ಆರೋಗ್ಯ, ಕೃಷಿ, ತಂತ್ರಜ್ಞಾನ ಮತ್ತು ಆಡಳಿತ ಸುಧಾರಣೆಗೆ ಪೂರಕವಾದ ಅಂಶಗಳನ್ನು ಒಳಗೊಂಡ ಸಮಗ್ರ ಪ್ರಸ್ತಾವವನ್ನು ಮಂಡಿಸಿದರು.

‘ಬೆಂಗಳೂರಿನ ಹೊರವಲಯದ ಕೆಂಪೇಗೌಡ ಬಡಾವಣೆಯಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಘಟಕ ಸ್ಥಾಪಿಸಲು ಅನುದಾನ ಮೀಸಲಿಡಬೇಕು, ಪ್ರತಿದಿನ 5 ಸಾವಿರ ಸೀರೆಗಳ ಉತ್ಪಾದನೆಗೆ ಅನುಕೂಲವಾಗುವಂತೆ ಮೈಸೂರು ರೇಷ್ಮೆ ಸೀರೆಯ ಹೊಸ ಉತ್ಪಾದನಾ ಘಟಕ ಆರಂಭಿಸಬೇಕು. ಕೃಷಿ-ಕೈಗಾರಿಕೆಗಳಿಗೆ ಸಮರ್ಪಕ ನೀರು ಪೂರೈಸಲು ವೈಜ್ಞಾನಿಕ ಸಲಹೆ ನೀಡಲು ಜಲ ಆಯೋಗ ರಚಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

‘ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ₹7ಕ್ಕೆ ಹೆಚ್ಚಿಸಬೇಕು, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ₹ 2 ಕೋಟಿಯಿಂದ ₹ 4 ಕೋಟಿಗೆ ಹೆಚ್ಚಿಸಬೇಕು, ಉದ್ಯೋಗಾಧಾರಿತ ಎಐ ಕೌಶಲ ಡಿಪ್ಲೊಮಾ ಕೋರ್ಸ್ ಆರಂಭಿಸಬೇಕು, ಹುಬ್ಬಳ್ಳಿಯಲ್ಲಿರುವ ಕಾನೂನು ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರವನ್ನು ಮೈಸೂರಿನಲ್ಲಿ ಸ್ಥಾಪಿಸಬೇಕು’ ಎಂದೂ ಬೇಡಿಕೆ ಮುಂದಿಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.