ಸೋಮವಾರ, ಮಾರ್ಚ್ 30, 2020
19 °C

ವೇಶ್ಯಾವಾಟಿಕೆ: ಯುವತಿಯರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹೊರರಾಜ್ಯದಿಂದ ಯುವತಿಯರನ್ನು ಕರೆತಂದು ಕೆ.ಆರ್‌. ಪುರದ ಹೂಡಿ ಗ್ರಾಮದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಯುವತಿಯರನ್ನು ರಕ್ಷಿಸಲಾಗಿದೆ.

ಆಂಧ್ರದ ಚಿತ್ತೂರಿನ ಶೇಖ್‌ ಮೊಹಮ್ಮದ್‌ ಗೌಸ್‌ (33) ಮತ್ತು ಚನ್ನಪಟ್ಟಣದ ಜಿನೇನಹಳ್ಳಿಯ ಹರೀಶ್‌ (33) ಬಂಧಿತರು. ಬಂಧಿತರಿಂದ ₹ 3 ಸಾವಿರ ನಗದು, 5 ಮೊಬೈಲ್‌, ಸ್ವೈಪಿಂಗ್‌ ಮೆಷಿನ್‌, ಕಂಪ್ಯೂಟರ್‌ ವಶಪಡಿಸಿಕೊಳ್ಳಲಾಗಿದೆ. ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಹುಡುಗಿಯರು ತಲೆಮರೆಸಿಕೊಂಡಿದ್ದಾರೆ. ಕೆ.ಆರ್‌.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಬ್‌ ಮೇಲೆ ದಾಳಿ: ಕಮಲಾನಗರ ಒಂದನೇ ಮುಖ್ಯರಸ್ತೆಯಲ್ಲಿರುವ ಕೆಂಪೇಗೌಡ ರಿಕ್ರಿಯೇಷನ್‌ ಕ್ಲಬ್‌ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 12 ಮಂದಿಯನ್ನು ಬಂಧಿಸಿ, ₹ 42 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಹಲವು ದಿನಗಳಿಂದ ಕ್ಲಬ್‌ನಲ್ಲಿ ಜೂಜಾಟದಲ್ಲಿ ತೊಡಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು