ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ 9 ಯುವತಿಯರ ರಕ್ಷಣೆ

Last Updated 15 ಅಕ್ಟೋಬರ್ 2020, 20:31 IST
ಅಕ್ಷರ ಗಾತ್ರ

ಬೆಂಗಳೂರು: ಎಚ್‌ಬಿಆರ್ ಲೇಔಟ್‌ ಬಳಿಯ ಸ್ಪಾ ಮೇಲೆ ಸಿಸಿಬಿ ಪೊಲೀಸರು ಬುಧವಾರ ದಾಳಿ ಮಾಡಿದ್ದು, ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ 9 ಯುವತಿಯರನ್ನು ರಕ್ಷಿಸಿದ್ದಾರೆ.

‘ಉದ್ಯೋಗದ ಆಮಿಷವೊಡ್ಡಿ ಹೊರ ರಾಜ್ಯದ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆಗೆ ತಳ್ಳಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸ್ಪಾ ಮೇಲೆ ದಾಳಿ ನಡೆಸಲಾಯಿತು. ಸ್ಪಾ ಮಾಲೀಕ ಹಾಗೂ ಗ್ರಾಹಕನನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘₹2600 ನಗದು ಹಾಗೂ ಎರಡು ಮೊಬೈಲ್‌ ಜಪ್ತಿ ಮಾಡ ಲಾಗಿದೆ. ಯುವತಿಯರನ್ನು ಅವರ ಸ್ವಂತ ಊರುಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಸ್ಪಾ ವಿರುದ್ಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT