ಭಾನುವಾರ, ಸೆಪ್ಟೆಂಬರ್ 22, 2019
27 °C

ಡಿಕೆಶಿ ಬಂಧನ ಖಂಡಿಸಿ ಬಳ್ಳಾರಿ ರಸ್ತೆ ಬಂದ್‌ಗೆ ಯತ್ನ

Published:
Updated:
Prajavani

ಯಲಹಂಕ: ಶಾಸಕ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಂತರರಾಷ್ಟ್ರೀಯ ವಿಮಾನನಿಲ್ದಾಣ ಮುಖ್ಯರಸ್ತೆಯ ಸಾದಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸಿದರು.

ಸಾದಹಳ್ಳಿ ಗೇಟ್‌ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು, ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲು ಪ್ರಯತ್ನಿಸಿದರು. ಇದರಿಂದ ವಿಮಾನನಿಲ್ದಾಣಕ್ಕೆ ತೆರಳುವ ವಾಹನಗಳು ಸಂಚಾರದಟ್ಟಣೆಯಲ್ಲಿ ಸಿಲುಕುತ್ತವೆ ಎಂದು ಮನಗೊಂಡ ಪೊಲೀಸರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆಗೆ ಅವಕಾಶ ನಿರಾಕರಿಸಿದರು. ಹೀಗಾಗಿ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಪ್ರತಿಭಟಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಟೈರ್‌ಗಳಿಗೆ ಬೆಂಕಿಹಚ್ಚಿ, ಮೋದಿ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯ ಕ್ತಪಡಿಸಿದರು.

ಕಾಂಗ್ರೆಸ್ ಮುಖಂಡರಾದ ಕೆ.ಅಶೋಕನ್, ದಾನೇಗೌಡ, ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ಎನ್.ಕೆ.ಮಹೇಶ್‌ ಕುಮಾರ್, ಬಿ.ಕೆ.ಮಂಜುನಾಥಗೌಡ ಇದ್ದರು.

Post Comments (+)