ಬುಧವಾರ, ಆಗಸ್ಟ್ 12, 2020
22 °C

ಕೋವಿಡ್‌ 19: ಸ್ಮಶಾನ ನಿರ್ಮಾಣಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿನಗರ: ಕೋವಿಡ್-19 ನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ತಿಪ್ಪಗೊಂಡನಹಳ್ಳಿ ಸಮೀಪದ ಕೆಂಪಗೊಂಡನಹಳ್ಳಿ ಬಳಿ ಮಾಡಲು ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

‘ಬೆಂಗಳೂರು ಮಹಾನಗರದ ನಾಗರಿಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಐತಿಹಾಸಿಕ ತಿಪ್ಪಗೊಂಡನಹಳ್ಳಿ ಕೆರೆ ಸಮೀಪವೇ ಐದು ಎಕರೆ ಪ್ರದೇಶದಲ್ಲಿ ಸ್ಮಶಾನ ನಿರ್ಮಿಸಲು ಯೋಜಿಸಲಾಗಿದೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು ‍ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. 

ಹಿರಿಯ ವಕೀಲ ರಾಮಕೃಷ್ಣಯ್ಯ ಮಾತನಾಡಿ, ‘ಈ ಜಾಗದಲ್ಲಿ ಬಡ ರೈತರು ಹಲವು ದಶಕಗಳಿಂದ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಪಕ್ಕದಲ್ಲಿಯೇ  ಕಾಲೇಜು ಇದೆ. ಕೋವಿಡ್‍ನಿಂದ ಮೃತಪಟ್ಟವರ ಅಂತ್ಯಕ್ರಿಯೆಗಾಗಿ ಈ ಜಮೀನು ಕಿತ್ತುಕೊಳ್ಳಬೇಡಿ’ ಎಂದು ಒತ್ತಾಯಿಸಿದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸದಸ್ಯ ಡಿ.ಹನುಮಂತಯ್ಯ, ಗ್ರಾಮ ಪಂಚಾಯ್ತಿ ಸದಸ್ಯರಾದ ಶಿವರುದ್ರೇಶ್, ರಾಮಚಂದ್ರೇಗೌಡ ಮಾತನಾಡಿದರು. ತಿಪ್ಪಗೊಂಡನಹಳ್ಳಿ, ಕೆಂಪಗೊಂಡನಹಳ್ಳಿ, ಎಲ್ಲಪ್ಪನಪಾಳ್ಯ ಗ್ರಾಮಸ್ಥರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು