ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ಯಾನರಿ ರಸ್ತೆಯಲ್ಲಿ ಮಹಿಳೆಯರ ಪ್ರತಿಭಟನೆ

Last Updated 9 ಫೆಬ್ರುವರಿ 2020, 20:22 IST
ಅಕ್ಷರ ಗಾತ್ರ

ಬೆಂಗಳೂರು:ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ಶಾಹೀನ್‌ ಬಾಗ್‌ ಮಾದರಿಯಲ್ಲಿ ಟ್ಯಾನರಿ ರಸ್ತೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಭಾನುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಶನಿವಾರ ಪ್ರತಿಭಟನೆ ಆರಂಭಗೊಂಡಿದ್ದು, ಮೊದಲ ದಿನ ಸುಮಾರು 100 ಮಂದಿ ಭಾಗವಹಿಸಿದ್ದರು. ಭಾನುವಾರ ಈ ಸಂಖ್ಯೆ 250ಕ್ಕೆ ಏರಿದೆ. ಬಿಲಾಲ್‌ ಮಸೀದಿ ಬಳಿ ಆಯೋಜಿಸಿರುವ ರ‍್ಯಾಲಿಯನ್ನು ಸಂಘಟಿಸಲು ನೆರವು ನೀಡಿದ ನಗರದ ಕಾಲೇಜು ವಿದ್ಯಾರ್ಥಿನಿ ಸಾಕೀಬ್‌ ಮಾತನಾಡಿ, ‘ಸಿಎಎ ವಿರೋಧಿಸಿ ನಿರಂತರ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ’ ಎಂದರು.

‘ಸಿಎಎ ಜಾರಿಗೊಳಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಮರುಪರಿಶೀಲನೆ ನಡೆಸದಿದ್ದರೆ, ಮುಂದಿನ ದಿನಗಳಲ್ಲಿ ಅದರ ಪರಿಣಾಮ ಎದುರಿಸಬೇಕಾದೀತು’ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮೇಘನಾ ಎಚ್ಚರಿಕೆ ನೀಡಿದರು. ವಿವಿಧ ಘಟನೆಗಳ ಮಹಿಳಾ ಸದಸ್ಯೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT