ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಂಗೇರಿ: ಮುನಿರತ್ನ ವಿರುದ್ಧ ಮೌನ ಪ್ರತಿಭಟನೆ

Published : 18 ಸೆಪ್ಟೆಂಬರ್ 2024, 16:35 IST
Last Updated : 18 ಸೆಪ್ಟೆಂಬರ್ 2024, 16:35 IST
ಫಾಲೋ ಮಾಡಿ
Comments

ಕೆಂಗೇರಿ: ಕೆಂಗೇರಿಯಲ್ಲೂ ಮುನಿರತ್ನ ವಿರುದ್ಧ ಪ್ರತಿಭಟನೆ ನಡೆಯಿತು.

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಹೊಯ್ಸಳ ಸರ್ಕಲ್ ಬಳಿ ಮೌನ ಪ್ರತಿಭಟನೆ ನಡೆಸಲು ಸಮಾವೇಶಗೊಂಡಿದ್ದರು.

ಸ್ಥಳಕ್ಕೆ ಆಗಮಿಸಿದ ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಲು ಆರಂಭಿಸಿದರು. ಭಾಷಣಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಬಳಿಕ ಕ್ಷೇತ್ರದ ನಾನಾ ಕಡೆಗಳಿಂದ ಬಂದ ಕಾರ್ಯಕರ್ತರು ಕೆಂಗೇರಿ ಉಪನಗರದ ಹೊಯ್ಸಳ ವೃತ್ತದಿಂದ ಗಣೇಶ ಆಟದ ಮೈದಾನದವರೆಗೆ ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಅನುಮತಿ ಕೇಳಿದ್ದರೂ ಹೋರಾಟ ಹತ್ತಿಕ್ಕಲು ಮುಂದಾಗಿರುವುದು ಸರಿ ಅಲ್ಲ ಎಂದು ಶಾಸಕರು ಅಸಮಾಧಾನ ಹೊರಹಾಕಿದರು.

ಒಕ್ಕಲಿಗ ಹಾಗೂ ದಲಿತ ಸಮುದಾಯದ ಕುರಿತು ಹಾಗೂ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಈತನ ಹೇಳಿಕೆ ಸಮರ್ಥನೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಕೀಳುಮಟ್ಟದ ಮನಸ್ಥಿತಿ ಪ್ರದರ್ಶನ ಮಾಡುತ್ತಿದೆ ಎಂದು ಪ್ರತಿಭಟನಕಾರರು ದೂರಿದರು.

ಮುನಿರತ್ನ ಅವರ ಈ ರೀತಿಯ ನಡವಳಿಕೆ ಹೊಸದೇನಲ್ಲ. ಹಲವರ ಮೇಲೆ ‌ಸುಳ್ಳು ಪ್ರಕರಣ ದಾಖಲು ಮಾಡುವುದು, ಅಧಿಕಾರಿಗಳಿಗೆ ಧಮ್ಕಿ ಹಾಕುವುದು ಸಾಮಾನ್ಯವಾಗಿತ್ತು ಎಂದು ಮುಖಂಡ ಹನುಮಂತರಾಯಪ್ಪ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT