ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ಹೇಳಿಕೆ ಖಂಡಿಸಿ ಪ್ರತಿಭಟನೆ

Published 16 ಏಪ್ರಿಲ್ 2024, 20:42 IST
Last Updated 16 ಏಪ್ರಿಲ್ 2024, 20:42 IST
ಅಕ್ಷರ ಗಾತ್ರ

ಯಲಹಂಕ: ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ, ಬ್ಯಾಟರಾಯನಪುರ ಬ್ಲಾಕ್‌ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಮೃತಹಳ್ಳಿ ವೃತ್ತದಿಂದ ಕುಮಾರಸ್ವಾಮಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಪಾದಯಾತ್ರೆಯಲ್ಲಿ ತೆರಳಿದ ಪ್ರತಿಭಟನಕಾರರು, ಬ್ಯಾಟರಾಯನಪುರದಲ್ಲಿರುವ ಬಿಬಿಎಂಪಿ ಯಲಹಂಕ ವಲಯ ಕಚೇರಿ ಸಭೆ ನಡೆಸಿ ಆಕ್ರೋಶ ಹೊರಹಾಕಿದರು.

ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಶೇಷಾದ್ರಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿರುವ ಕುಮಾರಸ್ವಾಮಿ ಅವರು, ಮಹಿಳೆಯರ ಬಗ್ಗೆ ಅವಹೇಳನಾಕಾರಿ ಪದವನ್ನು ಬಳಕೆ ಮಾಡುವ ಮೂಲಕ ಇಡೀ ಮಹಿಳಾಕುಲಕ್ಕೆ ಅಪಮಾನ ಮಾಡಿದ್ದಾರೆ. ಅವರಿಗೆ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದ್ದಿದ್ದರೆ ಇಂತಹ ಹೇಳಿಕೆ ನೀಡುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT