ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ನಿಷೇಧಕ್ಕೆ ಆಗ್ರಹ

Last Updated 17 ಮೇ 2020, 21:14 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೆಣ್ಣು ಮಕ್ಕಳಿಂದ 'ಮನಿ ಆರ್ಡರ್ ಚಳವಳಿ'ಯನ್ನು ಮದ್ಯ ನಿಷೇಧ ಆಂದೋಲನವು ಇದೇ 18ರಂದು ಹಮ್ಮಿಕೊಂಡಿದೆ.

ಲಾಕ್‍ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ನಿರ್ಬಂಧಿಸಿದ ಕಾರಣ ಮದ್ಯ ಸೇವಿಸುವ ಲಕ್ಷಾಂತರ ಮಂದಿ ವ್ಯಸನಮುಕ್ತರಾಗಿದ್ದಾರೆ. ಇದರಿಂದ ನಗರ ಹಾಗೂ ಗ್ರಾಮೀಣ ಭಾಗದ ಕುಟುಂಬಗಳಲ್ಲಿ ನೆಮ್ಮದಿ, ಶಾಂತಿ ನೆಲೆಸಿತ್ತು. ಆದರೆ, ಸರ್ಕಾರ ಆದಾಯದ ನೆಪ ಹೇಳಿ ಸಮಾಜದ ವಿರೋಧದ ನಡುವೆಯೂ ಮತ್ತೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ ಎಂದು ದೂರಿದೆ.

ಈ ಸಂದೇಶವನ್ನು ಸರ್ಕಾರಕ್ಕೆ ರವಾನಿಸುವ ಉದ್ದೇಶದಿಂದ ಹೆಣ್ಣುಮಕ್ಕಳು ಸ್ಥಳೀಯ ಅಂಚೆ ಕಚೇರಿಗಳಲ್ಲಿ ₹10 ಹಾಗೂ ₹20 ಮನಿಯಾರ್ಡರ್ ಮಾಡುವ ಮೂಲಕ ಮದ್ಯ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಬೇಕು ಎಂದು ವಿನಂತಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT