ಗುರುವಾರ , ಫೆಬ್ರವರಿ 20, 2020
19 °C

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನ ವಿರೋಧಿ ಯಾಗಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿ ಕೆ.ಆರ್.ಪುರದ ಮುಸ್ಲಿಮರು ವಿಜಿನಾ ಪುರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರು ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಎಂ.ಸಯ್ಯದ್ ಅಯೂಬ್ ಮಾತನಾಡಿ, ‘ವಿದೇಶಗಳಿಂದ ಬಂದು ಅಕ್ರಮವಾಗಿ ನೆಲೆಸಿರುವ ಹಿಂದೂ, ಸಿಖ್, ಬೌದ್ಧ, ಜೈನ್ ಹಾಗೂ ಪಾರ್ಸಿಗಳಿಗೆ ಭಾರತದ ಪೌರತ್ವ ನೀಡಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ, ಮುಸ್ಲಿಮರನ್ನು ಉದ್ದೇಶ ಪೂರ್ವಕವಾಗಿ ಕೈ ಬಿಡಲಾಗಿದೆ. ಧರ್ಮದ ಆಧಾರ ದಲ್ಲಿ ದೇಶವನ್ನು ವಿಭಜಿಸಲು ಮುಂದಾ ಗುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ನಡವಳಿಕೆ ಖಂಡನೀಯ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು