ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಚಿವ ಸ್ಥಾನ ನೀಡಲು ಆಗ್ರಹ’

Last Updated 23 ಆಗಸ್ಟ್ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿ ಅವರ ಅಭಿಮಾನಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅಭಿಮಾನಿಗಳ ಸಂಘ’ದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

‘ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಅಧಿಕಾರಕ್ಕಾಗಿ ಎಂದೂ ಲಾಬಿ ನಡೆಸಿದವರಲ್ಲ. ಅವರ ಹಿರಿತನಕ್ಕೂ ಬೆಲೆ ಸಿಗಲಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಕರಾವಳಿ ಭಾಗದ ಬಿಜೆಪಿ ಶಾಸಕರನ್ನು ಕಡೆಗಣಿಸಲಾಗಿದೆ’ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

‘ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಬಿಜೆಪಿಯ ಭದ್ರ ಕೋಟೆ ಆಗಿವೆ. ಹಾಲಾಡಿ ಅವರನ್ನು ಕಡೆಗಣಿಸಿರುವುದರಿಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದೇವೆ’ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT