ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: 10 ಪಾಲಿಕೆ ನೌಕರರಿಂದ ಅಹೋರಾತ್ರಿ ಧರಣಿ

Last Updated 6 ಡಿಸೆಂಬರ್ 2022, 15:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿನೌಕರರಿಗೆ ಇರುವ ‘ಆರೋಗ್ಯ ಸಂಜೀವಿನಿ ಯೋಜನೆ’ ಅನುಷ್ಠಾನಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 10 ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜ.6ರಿಂದ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.

‘ಮಹಾನಗರ ಪಾಲಿಕೆಯ ವೃಂದ ಮತ್ತು ನೇಮಕಾತಿ ನಿಯಮಾವಳಿಯ ಕರಡು ಪ್ರಚಾರಗೊಳಿಸಬೇಕು, ಕೆಜಿಐಡಿ ಮತ್ತು ಜಿಪಿಎಫ್‌ ಅನುಷ್ಠಾನಗೊಳಿಸಬೇಕು, ಸರ್ಕಾರದಿಂದ ಕ್ರೀಡಾಕೂಟ ನಡೆಸಬೇಕು ಎಂಬ ಬೇಡಿಕೆಗಳನ್ನು ನಗರಾಭಿವೃದ್ಧಿ, ಪೌರಾಡಳಿತ ಇಲಾಖೆಯ ಸಚಿವರು, ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಲಾಗಿದೆ’ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್‌ ತಿಳಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಯಲಿದ್ದು, 10 ಮಹಾನಗರ ಪಾಲಿಕೆ ಹಾಗೂ ಬಿಬಿಎಂಪಿ ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT