ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೇಡಿಕೆ ಈಡೇರಿಸಲು ಇಪಿಎಸ್ ಪಿಂಚಣಿದಾರರ ಪ್ರತಿಭಟನೆ

Published 27 ಮೇ 2024, 17:15 IST
Last Updated 27 ಮೇ 2024, 17:15 IST
ಅಕ್ಷರ ಗಾತ್ರ

ಬೆಂಗಳೂರು: ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿಯ ಇಪಿಎಸ್ ಪಿಂಚಣಿದಾರರು ನಗರದ ರಿಚ್ಮಂಡ್‌ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.  

ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದು ಕೇಂದ್ರದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇನ್ನು ಮುಂದೆ ಕೇಂದ್ರ ಸರ್ಕಾರ ಆಗಲಿ, ಇಪಿಎಫ್‌ಒ ಅಧಿಕಾರಿಗಳಾಗಲಿ ಸಬೂಬು ಹೇಳದೇ ₹ 7,500 ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು. 

ಆರ್‌ಸಿ ಗುಪ್ತ ಹಾಗೂ ಸುನಿಲ್ ಕುಮಾರ್ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರಬೇಕು. ಇಪಿಎಸ್ ನಿವೃತ್ತರ ಹೆಚ್ಚುವರಿ ಪಿಂಚಣಿಗೆ ಸಂಬಂಧಿಸಿದಂತೆ ಇಪಿಎಫ್ಒ ಅಧಿಕಾರಿಗಳು ತಾವೇ ನಿಗದಿಪಡಿಸಿಕೊಂಡಿದ್ದ ಗಡುವು ಮೇ 31ಕ್ಕೆ ಮುಕ್ತಾಯ ಆಗಲಿದ್ದು ತಕ್ಷಣವೇ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ರಾಷ್ಟ್ರೀಯ ಸಂಘರ್ಷ ಸಮಿತಿಯ ರಾಜ್ಯ ಅಧ್ಯಕ್ಷ ಜಿಎಸ್ಎಂ ಸ್ವಾಮಿ, ಬಿಎಂಟಿಸಿ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಅಧ್ಯಕ್ಷ ಶಂಕರ್ ಕುಮಾರ್ ಹಾಗೂ ಕಾರ್ಯಾಧ್ಯಕ್ಷ ನಂಜುಂಡೇಗೌಡ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT