ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಪರಿಷ್ಕೃತ ವೇತನದ ಹಿಂಬಾಕಿ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

Published 4 ಸೆಪ್ಟೆಂಬರ್ 2024, 14:22 IST
Last Updated 4 ಸೆಪ್ಟೆಂಬರ್ 2024, 14:22 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸಾರಿಗೆ ನಿಗಮಗಳ ನೌಕರರಿಗೆ ನೀಡಬೇಕಿರುವ ಪರಿಷ್ಕೃತ ವೇತನದ 38 ತಿಂಗಳ ಹಿಂಬಾಕಿ ಮೊತ್ತವನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್‌ ಸಂಘ ಒಕ್ಕೂಟ ವತಿಯಿಂದ ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.

2020ರ ವೇತನ ಪರಿಷ್ಕರಣೆ ಜಾರಿಯ ಬಳಿಕ ಹೆಚ್ಚಳದ ಮೊತ್ತವನ್ನು ಈವರೆಗೆ ಪಾವತಿಸಿಲ್ಲ. ಹಿಂಬಾಕಿ ಪಾವತಿ ಜೊತೆಯಲ್ಲೇ ಈ ವರ್ಷ ಮತ್ತೆ ವೇತನ ಪರಿಷ್ಕರಿಸಬೇಕು. ಡಾಬಾ, ಹೋಟೆಲ್‌ಗಳಲ್ಲಿ ವಾಹನ ನಿಲ್ಲಿಸುವ ಪದ್ಧತಿ ಸ್ಥಗಿತಗೊಳಿಸಿ, ಉತ್ತಮ ಕ್ಯಾಂಟೀನ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

‘ಶಕ್ತಿ ಯೋಜನೆಯಿಂದ ನಿಗಮಕ್ಕೆ ಶಕ್ತಿ ಬಂದಿದೆ’ ಎಂದು ಸಚಿವರು, ಅಧಿಕಾರಿಗಳು ಹೇಳುತ್ತಿದ್ದಾರೆ. ಇನ್ನೊಂದೆಡೆ ನಿಗಮಗಳಿಗೆ ಸರ್ಕಾರವು ಶಕ್ತಿ ಯೋಜನೆಯಡಿ ₹ 1,400 ಕೋಟಿ ಬಾಕಿ ನೀಡಬೇಕಿದೆ ಎಂದು ಅದೇ ಸಚಿವರು, ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ನಿಗಮದ ನೌಕರರಿಗೆ ಯಾವುದೇ ಶಕ್ತಿ ಬಂದಿಲ್ಲ’ ಎಂದು ಟೀಕಿಸಿದರು.

‘ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿರುವ ಆಡಳಿತ ಸಿಬ್ಬಂದಿಗೆ ಕರ್ತವ್ಯದ ಸಮಯವನ್ನು ಒಂದೇ ಏಕರೂಪವಾಗಿ ನಿಗದಿಪಡಿಸಬೇಕು. ಸಾರಿಗೆ ನಿಗಮಗಳನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಿಲ್ಲಬೇಕು. ಮಹಿಳಾ ಕಾರ್ಮಿಕರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.

ಒಕ್ಕೂಟದ ಅಧ್ಯಕ್ಷ ಎಚ್‌.ಎಲ್‌.ವಿಶ್ವನಾಥ್‌, ಪ್ರಧಾನ ಕಾರ್ಯದರ್ಶಿ ಜಿ.ಎಸ್‌. ಮಹದೇವಯ್ಯ, ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT