ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಲಯದ ಆದೇಶದ ಬಳಿಕ ತೀರ್ಮಾನ: ಡಾ.ಎಂ.ಸಿ. ಸುಧಾಕರ್

ಸಹಾಯಕ ಪ್ರಾಧ್ಯಾಪಕರ ನೇಮಕಾತಿ–2021ರ ಗೊಂದಲ
Published 12 ಜುಲೈ 2023, 16:04 IST
Last Updated 12 ಜುಲೈ 2023, 16:04 IST
ಅಕ್ಷರ ಗಾತ್ರ

ಬೆಂಗಳೂರು: ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ–2021ಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಗುರುವಾರ ನೀಡುವ ಆದೇಶ ಪರಿಶೀಲಿಸಿ ರಾಜ್ಯ ಸರ್ಕಾರವು ಅಂತಿಮ ತೀರ್ಮಾನ ಕೈಗೊಳ್ಳಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಭರವಸೆ ನೀಡಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿದರು.

‘ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವು ಒಂದು ವಿಷಯಕ್ಕೆ ಮಾತ್ರ ಸೀಮಿತವಾಗಿದೆ. ತಪ್ಪಿತಸ್ಥರ ಮೇಲೆ ಕ್ರಮವೂ ಆಗಿದೆ. ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ತನಿಖೆ ಮುಕ್ತಾಯದ ಬಗ್ಗೆ ಅಂತಿಮ ವರದಿ ಸಲ್ಲಿಸಿಲ್ಲ. ಹೀಗಾಗಿ, ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಅಂತಿಮ ವರದಿ ಸಲ್ಲಿಸಲು ಸೂಚಿಸಲಾಗಿದೆ’ ಎಂದು ಹೇಳಿದರು.

‘ಕಲ್ಯಾಣ ಕರ್ನಾಟಕದ 371‘ಜೆ’ಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರವು ಪರೀಕ್ಷೆ ಸಮಯದಲ್ಲಿ ಹೊರಡಿಸಿದ ಆದೇಶವು ಗೊಂದಲಕ್ಕೆ ಕಾರಣವಾಗಿತ್ತು. ಇನ್ನು ಕೆಲವೇ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಸಿಗಲಿದೆ’ ಎಂದು ಹೇಳಿದರು.

‘ನೇಮಕಾತಿಗೊಂಡಿರುವ 1,242 ಅಭ್ಯರ್ಥಿಗಳಿಗೂ ನ್ಯಾಯ ಒದಗಿಸುತ್ತೇವೆ. ಯಾರೊಬ್ಬರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಸರ್ಕಾರವು ಸಿಸಿಬಿ ಅಂತಿಮ ವರದಿ ಹಾಗೂ ನ್ಯಾಯಾಲಯದ ತೀರ್ಪು ನಿರೀಕ್ಷಿಸುತ್ತಿದೆ’ ಎಂದು ಹೇಳಿದರು.

ಸಚಿವರ ಭರವಸೆ ಮೇರೆಗೆ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು, ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ವಾಪಸ್‌ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT