ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಪಿಂಚಣಿ ಸೌಲಭ್ಯಕ್ಕಾಗಿ ಶಾಲಾ-ಕಾಲೇಜು ನೌಕರರ ಪ್ರತಿಭಟನೆ

Last Updated 21 ನವೆಂಬರ್ 2022, 7:56 IST
ಅಕ್ಷರ ಗಾತ್ರ

ಬೆಂಗಳೂರು: 'ಪಿಂಚಣಿ ಸೌಲಭ್ಯ ಕಲ್ಪಿಸಬೇಕು' ಎಂದು ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ನಗರದ ಸ್ವಾತಂತ್ರ್ಯ ‌ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಿಂದ ಬಂದಿರುವ ನೌಕರರು, 'ಪ್ರಾಣಾನೂ ಬಿಡಲ್ಲ. ಪಿಂಚಣಿಯೂ ಬಿಡಲ್ಲ' ಎಂಬ ಘೋಷಣಾ ಫಲಕ ಪ್ರದರ್ಶಿಸುತ್ತಿದ್ದಾರೆ.
'2006ರ ಏಪ್ರಿಲ್ 1ರ ಪೂರ್ವದಲ್ಲಿ ನೇಮಕವಾಗಿ, ನಂತರ ಅನುದಾನಕ್ಕೆ ಒಳಪಟ್ಟ ನೌಕರರ ಸೇವೆಯನ್ನು ಪಿಂಚಣಿಗೆ ಪರಿಗಣಿಸಿ 'ಹಳೆಯ ನಿಶ್ಚಿತ ಪಿಂಚಣಿ' ನೀಡಬೇಕು. ರಾಜ್ಯದ ಪ್ರತಿಯೊಬ್ಬ ಅನುದಾನಿತ ನೌಕರರಿಗೂ ಇದೇ ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರಿ ಹಾಗೂ ಅನುದಾನಿತ ನೌಕರರ ಮಧ್ಯೆ ಯಾವುದೇ ತಾರತಮ್ಯ ಮಾಡದೇ ಆರೋಗ್ಯ ಸೌಲಭ್ಯ ನೀಡಬೇಕು' ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.
ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT