ಬೆಂಗಳೂರು: ‘ಅಗ್ನಿ ಪಥ ಯೋಜನೆ ವಿರೋಧಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಈ ಯೋಜನೆಯಿಂದ ಯುವಕರಿಗೆ ದೊಡ್ಡ ಅನ್ಯಾಯವಾಗಲಿದ್ದು, ಪ್ರತಿಭಟನೆ ಅನಿವಾರ್ಯವಾಗಿದೆ. ಎಷ್ಟು ಸಾಧ್ಯವೋ ಅಷ್ಟು ಜನರನ್ನು ಸೇರಿಸಿ ಈ ಅನ್ಯಾಯ ವಿಚಾರವನ್ನು ಜನರಿಗೆ ತಲುಪಿಸುವಂತೆ ಕಾರ್ಯಕರ್ತರಿಗೆ ತಿಳಿಸಲಾಗಿದೆ’ ಎಂದರು.

ಯೋಜನೆ ಕೈಬಿಡಲು ಕೇಂದ್ರ ಸರ್ಕಾರ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಏನಾದರೂ ಹೇಳಲಿ. ನಾವು ನಮ್ಮ ವಿಚಾರವನ್ನು ವ್ಯಕ್ತಪಡಿಸುತ್ತೇವೆ. ನಮ್ಮ ಮಕ್ಕಳು ನಾಲ್ಕು ವರ್ಷ ಸೇನೆಯಲ್ಲಿ ಸೇವೆಯಲ್ಲಿ ಸಲ್ಲಿಸಿ ನಂತರ ಭದ್ರತಾ ಸಿಬ್ಬಂದಿ ಆಗಲು ಬಿಡುವುದಿಲ್ಲ’ ಎಂದರು.

‘ಬಿಜೆಪಿ ನಾಯಕರ ಮಕ್ಕಳು ವೈದ್ಯರು, ಎಂಜಿನಿಯರ್, ಪ್ರೊಫೆಸರ್ ಆಗಬೇಕು, ಬಡವರ ಮಕ್ಕಳು ಭದ್ರತಾ ಸಿಬ್ಬಂದಿ ಆಗಬೇಕಾ? ಸೇನೆಗೆ ಯುವಕರನ್ನು ತೆಗೆದುಕೊಳ್ಳಲಿ. ಆದರೆ, ಪೂರ್ಣಾವಧಿಗೆ ತೆಗೆದುಕೊಂಡು ಅವರು ನಿವೃತ್ತಿಯಾಗುವವರೆಗೂ ಸೇವೆಗೆ ಅವಕಾಶ ನೀಡಲಿ. ಯೋಧರ ವೇತನ, ಪಿಂಚಣಿಗೆ ಸಮಸ್ಯೆ ಇದ್ದರೆ, ಸರ್ಕಾರ ಬೇರೆ ವಿಚಾರಗಳಿಗೆ ಸೆಸ್ ಹಾಕುತ್ತಿರುವಂತೆ ಸೆಸ್ ಹಾಕಲಿ' ಎಂದರು.

ಕಾಂಗ್ರೆಸ್ ತ್ಯಜಿಸಲು ಹಿರಿಯ ನಾಯಕ ಎಂ.ಆರ್. ಸೀತಾರಾಂ ನಿರ್ಧರಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, 'ಅವರು ಮಂತ್ರಿಯಾಗಿದ್ದರು. ಸದನದಲ್ಲಿ ಆಡಳಿತ ಪಕ್ಷದ ನಾಯಕರಾಗಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಅವರಿಗೆ ಟಿಕೆಟ್ ಕೊಟ್ಟಿತ್ತು. ಆದರೆ, ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಕಳೆದ ಬಾರಿ ವಿಧಾನ ಪರಿಷತ್ ಎರಡು ಸ್ಥಾನಗಳಿಗೆ ನಸೀರ್ ಅಹ್ಮದ್ ಮತ್ತು ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿದ್ದೆವು. ಈ ಬಾರಿ ಜೈರಾಮ್ ರಮೇಶ್ ಅವರಿಗೆ ನೀಡಿದ್ದೇವೆ. ಇದರಲ್ಲಿ ಏನಾದರೂ ತಪ್ಪಿದ್ದರೆ ಹೇಳಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.