ಮಂಗಳವಾರ, ನವೆಂಬರ್ 12, 2019
28 °C

ಕಬ್ಬನ್ ಉದ್ಯಾನದಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ವಿರೋಧ: ಪ್ರತಿಭಟನೆ

Published:
Updated:

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ಏಳು ಅಂತಸ್ತಿನ ಕಟ್ಟಡ ನಿರ್ಮಾಣ ವಿರೋಧಿಸಿ ‘ಕಬ್ಬನ್‌ ಪಾರ್ಕ್ ನಡಿಗೆದಾರರ ಸಂಘಟನೆ’ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ಪ್ರತಿಭಟನೆ ನಡೆಯಿತು.

ಬೆಳಿಗ್ಗೆ 6ರಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ‘ಕಬ್ಬನ್ ಉದ್ಯಾನದ ವಾತಾವರಣ ಹಾಳು ಮಾಡಬೇಡಿ’, ‘ಕಟ್ಟಡ ನಿರ್ಮಾಣ ನಿಲ್ಲಿಸಿ ಕಬ್ಬನ್ ಪಾರ್ಕ್ ಉಳಿಸಿ’, ‘ಲಾಲ್‌ಬಾಗ್‌ನಂತೆ ಕಬ್ಬನ್ ಉದ್ಯಾನ ಅಭಿವೃದ್ಧಿಗೊಳಿಸಿ’ ಎಂಬ ಘೋಷಣೆಗಳನ್ನು ಕೂಗಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರತಿಕ್ರಿಯಿಸಿ (+)