ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಜಿ–ಐಜಿಪಿ ಕಚೇರಿ ಬಳಿ ಧರಣಿ

ಬೀದರ್‌ನಲ್ಲಿ ಮಕ್ಕಳ ಮೇಲಿನ ಕಿರುಕುಳಕ್ಕೆ ಖಂಡನೆ
Last Updated 7 ಫೆಬ್ರುವರಿ 2020, 10:18 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಲೆಯಲ್ಲಿ ನಾಟಕ ಮಾಡಿದ ಮಕ್ಕಳು, ಅವರ ಪೋಷಕರು ಹಾಗೂ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬೀದರ್ ಪೊಲೀಸರು ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿ ನಗರದ ಡಿಜಿ–ಐಜಿಪಿ ಕಚೇರಿ ಎದುರು ಹಲವು ಸಂಘಟನೆಗಳ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.

ನೃಪತುಂಗ ರಸ್ತೆಯಲ್ಲಿರುವ ಡಿಜಿ– ಐಜಿಪಿ ಪ್ರವೀಣ್ ಸೂದ್ ಕಚೇರಿಯ ಪ್ರವೇಶ ದ್ವಾರದಲ್ಲಿ ಸೇರಿದ್ದ ಪ್ರತಿಭಟನಕಾರರು, ಘೋಷಣಾ ಫಲಕಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

‘ಮಕ್ಕಳು, ಶಿಕ್ಷಕರು ಮತ್ತು ಪೋಷಕರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ. ಮಕ್ಕಳು ನಾಟಕ ಪ್ರದರ್ಶನ ಮಾಡಿದ್ದಕ್ಕಾಗಿ ತಾಯಿ, ಶಿಕ್ಷಕಿಯನ್ನು ಬಂಧಿಸಿರುವ ಪೊಲೀಸರ ಕ್ರಮ ಖಂಡನೀಯ’ ಎಂದರು.

‘ಪೊಲೀಸ್ ಇಲಾಖೆ ಹೆಸರಿಗೆ ಕಳಂಕ ತಂದಿರುವ ಬೀದರ್‌ನ ಸಂಬಂಧಪಟ್ಟ ಪೊಲೀಸರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು‘ ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT