ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ಮೇಲೆ ಹಲ್ಲೆ: ಠಾಣೆ ಎದುರು ಪ್ರತಿಭಟನೆ

Last Updated 14 ಜೂನ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಫೋರ್ಟಿಸ್ ಆಸ್ಪತ್ರೆ ವೈದ್ಯ ಹಾಗೂ ಶುಶ್ರೂಷಕಿ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ಖಂಡಿಸಿ ಪುಟ್ಟೇನಹಳ್ಳಿ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ, ಆಸ್ಪತ್ರೆಯಿಂದ ಠಾಣೆಯವರೆಗೆ ರ‍್ಯಾಲಿ ನಡೆಸಿದರು. ಭುಜಕ್ಕೆ ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು.

‘ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಹಾಗೂ ಶುಶ್ರೂಷಕಿ ಮೇಲೆ ರೋಗಿಯ ಪುತ್ರ ಮತ್ತು ತಾಯಿ ಹಲ್ಲೆ ಮಾಡಿದ್ದಾರೆ. ತಲೆಗೆ ತೀವ್ರ ಗಾಯವಾಗಿದ್ದರಿಂದ ವೈದ್ಯರು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹಲ್ಲೆ ಬಗ್ಗೆ ದೂರು ನೀಡಲಾಗಿದ್ದು, ಆರೋಪಿಯನ್ನೂ ಪೊಲೀಸರು ಬಂಧಿಸಿದ್ದಾರೆ. ಆದರೆ, ಆರೋಪಿ ಜಾಮೀನಿನ ಮೇಲೆ ಒಂದೇ ದಿನದಲ್ಲೇ ಹೊರಗೆ ಬಂದಿದ್ದಾರೆ’ ಎಂದೂ ಪ್ರತಿಭಟನಕಾರು ದೂರಿದರು.

‘ಜೀವನ ಹಂಗು ತೊರೆದು ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ವೈದ್ಯರ ಮೇಲಿನ ಹಲ್ಲೆ ಹಾಗೂ ಆಸ್ಪತ್ರೆ ಆಸ್ತಿಗೆ ಹಾನಿ ಮಾಡುವ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ವೈದ್ಯರು ಹಾಗೂ ಆಸ್ಪತ್ರೆಗೆ ಸೂಕ್ತ ಭದ್ರತೆ ಒದಗಿಸಬೇಕು’ ಎಂದು ಪ್ರತಿಭಟನಕಾರರು ಪೊಲೀಸರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT