ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ನೌಕರರ ಮುಷ್ಕರ ಮುಂದುವರಿಕೆ

Last Updated 3 ಅಕ್ಟೋಬರ್ 2020, 18:37 IST
ಅಕ್ಷರ ಗಾತ್ರ

ಯಲಹಂಕ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಶನಿವಾರ 11ನೇ ದಿನಕ್ಕೆ ಕಾಲಿಟ್ಟಿತು.

ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ಬೆಂಗಳೂರು ಉತ್ತರ ತಾಲ್ಲೂಕಿನ ಗುತ್ತಿಗೆ ಸಿಬ್ಬಂದಿ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿದರು.

‘ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಅನುದಾನ ಹೆಚ್ಚಿಸಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾಭದ್ರತೆ ಒದಗಿಸಿ, ಆರೋಗ್ಯ ಭಾಗ್ಯ ಯೋಜನೆಯನ್ನು ವಿಸ್ತರಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಏಕರೂಪದ ವೇತನ ಜಾರಿಗೊಳಿಸುವುದರ ಜೊತೆಗೆ ಇಲಾಖೆಯಿಂದ ನೇರವಾಗಿ ವೇತನ ಪಾವತಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಮಿನಿ ವಿಧಾನಸೌಧದವರೆಗೆ ಮೆರವಣಿಗೆಯಲ್ಲಿ ತೆರಳಿದ ನೌಕರರ ನಿಯೋಗ, ತಹಶೀಲ್ದಾರ್ ಎನ್.ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT