ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎನ್. ಮೂರ್ತಿ, ‘ಸರ್ಕಾರ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್‌ಪಿ) ಅನುದಾನ ದರ್ಬಳಕೆ ಮಾಡಿಕೊಂಡಿರುವ ಹಣವನ್ನು ಕೂಡಲೇ ಸಮುದಾಯದ ಅಭಿವೃದ್ಧಿಗೆ ಹಿಂದಿರುಗಿಸಬೇಕು’ ಎಂದು ಒತ್ತಾಯಿಸಿದರು.