ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ಪ್ರತಿಭಟನೆ: ಹರಿದು ಬಂದ ಜನಸಾಗರ

Last Updated 18 ಜೂನ್ 2022, 7:20 IST
ಅಕ್ಷರ ಗಾತ್ರ

ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಸಿದ್ಧಪಡಿಸಿರುವ ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನಾ ಸಭೆ ಜನಸಾಗರವೇ ಹರಿದುಬಂದಿದೆ.

ರಾಜ್ಯದ ವಿವಿಧೆಡೆಯಿಂದ ಬಂದಿರುವ ಸಾವಿರಾರು ಮಂದಿ ಸ್ವಾತಂತ್ರ್ಯ ಉದ್ಯಾನದಲ್ಲಿ ಸಮಾವೇಶಗೊಂಡಿದ್ದಾರೆ. ರಾಜ್ಯದ ವಿವಿಧ ಸಮುದಾಯಗಳ ಹಲವು ಮಠಾಧೀಶರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ನೂರಾರು ಮಂದಿ ಸಾಹಿತಿಗಳು ಪ್ರತಿಭಟನಾ ಸಭೆಗೆ ಬಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.‌ಗೋಪಾಲ ಗೌಡ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್, ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT