ಸೋಮವಾರ, ಫೆಬ್ರವರಿ 24, 2020
19 °C

ಮೀಸಲಾತಿ ಹೆಚ್ಚಿಸುವಂತೆ 25ಕ್ಕೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪರಿಶಿಷ್ಟ ಪಂಗಡದ ಜನಸಂಖ್ಯೆಯ ಆಧಾರದ ಮೇಲೆ ರಾಜ್ಯ ಸರ್ಕಾರ ಶೇ 7.5ರಷ್ಟು ಮೀಸಲಾತಿ ಸೌಲಭ್ಯ ನೀಡಬೇಕು’ ಎಂದು ಒತ್ತಾಯಿಸಿ ಪರಿಶಿಷ್ಟ ಪಂಗಡ ಸಮುದಾಯ ಹೋರಾಟ ಸಮಿತಿಯು ಇದೇ 25ರಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ  ಸಿರಿಗೆರೆ ತಿಪ್ಪೇಶ್, ‘ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆಯು 60 ಲಕ್ಷಕ್ಕೂ ಹೆಚ್ಚು ಇದೆ. ನಮ್ಮ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಉದ್ಯೋಗದಿಂದಲೂ ವಂಚಿತರಾಗಿದ್ದಾರೆ. ಹಾಗಾಗಿ, ಪರಿಶಿಷ್ಟ ಪಂಗಡಕ್ಕೆ ಇರುವ ಶೇ 3ರ ಮೀಸಲಾತಿಯನ್ನು ಶೇ 7.5ಕ್ಕೆ ಏರಿಸಬೇಕು’ ಎಂದು ಒತ್ತಾಯಿಸಿದರು. 

‘ಕೆಲ ಮುಂದುವರಿದ ವರ್ಗದವರು ಪರಿಶಿಷ್ಟ ಪಂಗಡದಲ್ಲಿರುವ ಹೆಸರು ಬಳಕೆ ಮಾಡಿಕೊಂಡು ತಹಶೀಲ್ದಾರ್‌ ಅವರಿಂದ ಅಸಂವಿಧಾನಾತ್ಮಕವಾಗಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸೌಲಭ್ಯ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಇದರ ಬಗ್ಗೆ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು