ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‍ಲೈನ್ ಮೂಲಕ ಇಂದು ಪ್ರತಿಭಟನೆ

Last Updated 27 ಮೇ 2020, 19:04 IST
ಅಕ್ಷರ ಗಾತ್ರ

ಬೆಂಗಳೂರು: ದುಡಿಮೆಯ ಅವಧಿಯನ್ನು 8ರಿಂದ 12 ಗಂಟೆಗೆ ಹೆಚ್ಚಿಸುವ ಪ್ರಸ್ತಾಪ ಕೈಬಿಡುವುದೂ ಸೇರಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ನೇತೃತ್ವದಲ್ಲಿ ಇದೇ 28ರಂದು ಆನ್‍ಲೈನ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

'ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್‍ಡೌನ್‍ನಿಂದ ವಲಸೆ ಕಾರ್ಮಿಕರು, ದಿನಗೂಲಿ ನೌಕರರು, ಕಟ್ಟಡ ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ಉದ್ದೇಶದಿಂದ ಆನ್‍ಲೈನ್ ಪ್ರಚಾರವನ್ನು ಹಮ್ಮಿಕೊಳ್ಳಲಾಗಿದೆ' ಎಂದು ಸಂಘಟನೆಯ ಬೆಂಗಳೂರು ಜಿಲ್ಲಾ ಸಮಿತಿ ಕಾರ್ಯದರ್ಶಿ ಎ.ಶಾಂತಾ ತಿಳಿಸಿದರು.

'ವಲಸೆ ಕಾರ್ಮಿಕರು, ಬಡವರು, ಮಹಿಳೆಯರು ಹಾಗೂ ಮಕ್ಕಳಿಗೆ ಲಾಕ್‍ಡೌನ್ ವೇಳೆ ಸುರಕ್ಷಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ಖಾತರಿಪಡಿಸಬೇಕು. ಕಾರ್ಮಿಕರಿಗೆ ಆಹಾರ, ವಸತಿ ಒದಗಿಸಬೇಕು. ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಬೇಕು. ಕೌಟುಂಬಿಕ ದೌರ್ಜನ್ಯಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT