ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ನಿವೇಶನಗಳಿಗೆ ಇ–ಖಾತಾ: ಆಗ್ರಹ

Last Updated 11 ಜುಲೈ 2019, 20:23 IST
ಅಕ್ಷರ ಗಾತ್ರ

ಯಲಹಂಕ: ನಗರದ ಸುತ್ತಮುತ್ತ ಗ್ರಾಮೀಣ ಪ್ರದೇಶಗಳೂ ವೇಗವಾಗಿ ಬೆಳೆಯುತ್ತಿರುವುದರಿಂದ ಜನಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮಠಾಣಾ ವ್ಯಾಪ್ತಿ ಹೊರತುಪಡಿಸಿ, ಜನರು ಗ್ರಾಮಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ನಿರ್ಮಿಸಿಕೊಳ್ಳುತ್ತಿರುವ ನಿವೇಶನ ಮತ್ತು ಮನೆಗಳಿಗೆ ಇ-ಖಾತೆ ಮಾಡಿಸಲು ಮತ್ತು ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಬೇಕು ಎಂದು ಮುಖಂಡ ದಾನೇಗೌಡ ಆಗ್ರಹಿಸಿದರು.

ಜಾಲಾ ಹೋಬಳಿ ಸಾತನೂರು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ‘ಇದರಿಂದ ಬಡಜನರಿಗೆ ಸಾಲಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವುದರ ಜೊತೆಗೆ ಪಂಚಾಯಿತಿಗೂ ಆದಾಯ ಬರುತ್ತದೆ. ಜನರು ತೆರಿಗೆ ಪಾವತಿಸಲು ಸಿದ್ಧರಾಗಿದ್ದು, ಪಂಚಾಯ್ತಿ ಅಧಿಕಾರಿಗಳು ಅವಕಾಶವಿರುವ ಕಡೆಗಳಲ್ಲಿ ತೆರಿಗೆ ಸಂಗ್ರಹಿಸಲು ಮುಂದಾಗಬೇಕು’ ಎಂದರು.

ತೆರಿಗೆ ಹಣದ ಜೊತೆಗೆ ಸರ್ಕಾರದ ಅನುದಾನವನ್ನೂ ಬಳಸಿಕೊಂಡು ಗ್ರಾಮಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸವಲತ್ತುಗಳ ವಿತರಣೆ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, ಮಹಿಳೆಯರಿಗೆ ಹೊಲಿಗೆಯಂತ್ರ, ಭಾಗ್ಯಲಕ್ಷ್ಮಿ ಬಾಂಡ್, ಅಂಗವಿಕಲರಿಗೆ ಸಹಾಯಧನದ ಚೆಕ್ ಹಾಗೂ ಸೌರಶಕ್ತಿಯ ಸೆಟ್ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT