ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿ ಆವರಣ ಪ್ರವೇಶ ದ್ವಾರ ತೆರೆಯುವಂತೆ ಒತ್ತಾಯಿಸಿ ಪ್ರತಿಭಟನೆ

Last Updated 3 ಸೆಪ್ಟೆಂಬರ್ 2020, 18:04 IST
ಅಕ್ಷರ ಗಾತ್ರ

ಕೆಂಗೇರಿ: ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮರಿಯಪ್ಪನಪಾಳ್ಯದ ಬಳಿಯಲ್ಲಿರುವ ಜ್ಞಾನಭಾರತಿ ಆವರಣದ ಗೇಟನ್ನು ತೆರೆಯುವಂತೆ ಒತ್ತಾಯಿಸಿ ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೋವಿಡ್ ಕಾರಣಕ್ಕೆ ಬೆಂಗಳೂರು ವಿಶ್ವ ವಿದ್ಯಾನಿಲಯವನ್ನು ಸಂಪರ್ಕಿಸುವ ರಸ್ತೆಗಳಿಗೆ ಸಾರ್ವಜನಿಕರ ಓಡಾಟ ನಿರ್ಬಂಧಿಸಲಾಗಿತ್ತು. ಹೀಗಾಗಿ ಈ ಮರಿಯಪ್ಪನ ಪಾಳ್ಯದಿಂದ ಮೂಡಲಪಾಳ್ಯ, ವಿಜಯನಗರ, ಪ್ರಶಾಂತ ನಗರದತ್ತ ತಮ್ಮ ದೈನಂದಿನ ಕಾರ್ಯಗಳಿಗೆ ತೆರಳುವ ಜನರು ಮೈಸೂರು ರಸ್ತೆಯ ಮುಖಾಂತರ ಅಥವಾ ರಿಂಗ್ ರಸ್ತೆಯ ಮುಖಾಂತರ ಓಡಾಡುವುದು ಅನಿವಾರ್ಯವಾಗಿತ್ತು. ರಿಂಗ್ ರಸ್ತೆಯಲ್ಲೂ ಕೆಲ ದಿನಗಳಿಂದ ವೈಟ್‍ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಬದಲಿ ರಸ್ತೆ ಇಲ್ಲದ ಕಾರಣ ಸಂಚಾರ ದಟ್ಟಣೆಯೂ ಕಂಡು ಬರುತ್ತಿತ್ತು. ನೂರಾರು ಸ್ಥಳೀಯರು ಬಿಜೆಪಿ ಮುಖಂಡ ಎಸ್.ಟಿ. ಪ್ರಕಾಶ್‍ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆ ಸಂಚಾರಕ್ಕೆ ಅವಕಾಶ ನೀಡುವಂತೆ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರೊ.ಕೆ.ಆರ್.ವೇಣುಗೋಪಾಲ್ ಪ್ರತಿಕ್ರಿಯಿಸಿ, ’ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆರೋಗ್ಯ ದೃಷ್ಟಿಯಿಂದ ಪ್ರವೇಶ ದ್ವಾರ ಮುಚ್ಚಲಾಗಿದೆ. ವಿಶ್ವವಿದ್ಯಾಲಯ ಆವರಣದ ರಸ್ತೆಯನ್ನು ಸಾರ್ವಜನಿಕರು ಬಳಸುವುದು ಸರಿಯಲ್ಲ‍‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT