ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕರವೇ ಕಾರ್ಯಕರ್ತರ ಬಂಧನಕ್ಕೆ ಆಕ್ರೋಶ, ಸಂಘಟನೆಗಳಿಂದ ಪ್ರತಿಭಟನೆ

Published 29 ಡಿಸೆಂಬರ್ 2023, 15:34 IST
Last Updated 29 ಡಿಸೆಂಬರ್ 2023, 15:34 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡದಲ್ಲಿ ನಾಮಫಲಕ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರ‌ ಕ್ರಮ ಖಂಡಿಸಿ ಶುಕ್ರವಾರ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ‘ರಾಜ್ಯಗಳು ಉದಯ ಆಗಿರುವುದೇ ಭಾಷೆಯ ಆಧಾರದ ಮೇಲೆ. ಕನ್ನಡ ಕಡ್ಡಾಯ ಎನ್ನುವ ಕಾನೂನು ಇದ್ದರೂ ಪಾಲಿಸದೇ ಇದ್ದಾಗ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರು. ಅದನ್ನು ಎತ್ತಿ ತೋರಿಸಿದ್ದಕ್ಕೆ ಕನ್ನಡಪರ ಹೋರಾಟಗಾರರನ್ನು ಬಂಧಿಸಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಅಕ್ರಮವಾಗಿ ಬಂಧಿಸಿರುವ ಕನ್ನಡಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು. ಅವರ ಮೇಲೆ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಆಗ್ರಹಿಸಿದರು.

‘ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಇರಬೇಕು ಎಂಬ ನಿಯಮ ಇದ್ದರೂ ಯಾಕೆ ಪಾಲನೆಯಾಗುತ್ತಿಲ್ಲ. ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಹೋರಾಟ ಮಾಡುವ ಮುನ್ನವೇ ಎಚ್ಚೆತ್ತು ಕನ್ನಡ ನಾಮಫಲಕ ಹಾಕದವರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೆ, ಪ್ರತಿಭಟನೆ ಯಾಕೆ ನಡೆಯುತ್ತಿತ್ತು’ ಎಂದು ಪ್ರಶ್ನಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ. ಪಾಟೀಲ ಅವರು ಯಾರ ಪರವಾಗಿ ಇದ್ದಾರೆ? ಅವರು ತಮ್ಮ ಸ್ವಾರ್ಥಕ್ಕೆ ರಾಜ್ಯವನ್ನು ಬಲಿ ಕೊಡುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ರಮೇಶ್ ಬೆಲ್ಲಂಕೊಂಡ, ಜಗದೀಶ್ ವಿ. ಸದಂ, ಜಗದೀಶ್ ಚಂದ್ರ, ಸುಷ್ಮಾ ವೀರ, ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು ಹಾಗೂ ನಾರಾಯಣ ಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಯವರು ಪಾಲ್ಗೊಂಡಿದ್ದರು.

ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. 
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT