'ಹಂತ ಹಂತವಾಗಿ ಬೇಡಿಕೆ ಈಡೇರಿಕೆ’
‘ರಾಜ್ಯ ಸರ್ಕಾರಿ ನಿವೃತ್ತ ನೌಕರರ ಮತ್ತು ಕುಟುಂಬ ಪಿಂಚಣಿದಾರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಕೆಲವು ಬೇಡಿಕೆಗಳು ಪಕ್ಷದ ಪ್ರಣಾಳಿಕೆಯಲ್ಲೂ ಇದ್ದು ಸರ್ಕಾರ ಇವುಗಳನ್ನು ನಿಶ್ಚಿತವಾಗಿ ಈಡೇರಿಸುತ್ತದೆ. ಕೆಲವು ಹಣಕಾಸಿನ ವಿಷಯ ಆಗಿರುವುದರಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ಆರೋಗ್ಯ ವಿಮಾ ಸೌಲಭ್ಯ ನಿವೃತ್ತ ನೌಕರರು ಮತ್ತು ಕುಟುಂಬ ವರ್ಗದವರಿಗೆ ಕೆಎಸ್‌ಆರ್‌ಟಿಸಿ ಮತ್ತು ನಗರ ಸಾರಿಗೆ ಬಸ್‌ಗಳಲ್ಲಿ ಶೇಕಡ 25-50 ರಷ್ಟು ರಿಯಾಯಿತಿ ನೀಡಬೇಕು ಎಂಬಂತಹ ಬೇಡಿಕೆಗಳು ನ್ಯಾಯಯುತವಾಗಿವೆ. ಇವು ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆ ಎನಿಸುವುದಿಲ್ಲ ಎಂದು ಹೇಳಿದರು.