ಬೆಂಗಳೂರು: ಜನಸಂಖ್ಯೆಗೆ ಅನುಗುಣವಾಗಿ ದಲಿತರಿಗೆ ಶೇಕಡ 24.1ರಷ್ಟು ಅನುದಾನವನ್ನು ಬಜೆಟ್ನಲ್ಲಿ ಮೀಸಲಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ಪರಿಶಿಷ್ಟ ಜಾತಿಯ ಒಳ ಮೀಸಲಾತಿಯಲ್ಲಿ ಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲವನ್ನು ಸರಿಪಡಿಸಿ, 101 ಪರಿಶಿಷ್ಟ ಜಾತಿಗಳಿಗೂ ಅನ್ಯಾಯವಾಗದಂತೆ ನೇಮಕಾತಿ ಮಾಡಿಕೊಳ್ಳಬೇಕು. ಎಸ್ಸಿ ಎಸ್ಟಿ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮಾಡಬೇಕು. ರಾಜ್ಯದಲ್ಲಿ ನಾಗರಿಕ ಹಕ್ಕುಗಳ ರಕ್ಷಣೆ ಕಾಯ್ದೆ ಮತ್ತು ದೌರ್ಜನ್ಯ ತಡೆ ಕಾಯ್ದೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪ್ರತಿಯೊಂದು ಗ್ರಾಮದಲ್ಲಿ ದಲಿತರಿಗಾಗಿ ಸ್ಮಶಾನ ಭೂಮಿಯನ್ನು ಮೀಸಲಿರಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಈ ಎರಡು ವೃತ್ತಿಗಳಲ್ಲಿ ಮೀಸಲಾತಿ ಸೌಲಭ್ಯ ಅನುಷ್ಠಾನಗೊಳಿಸಬೇಕು. ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯನ್ನು ಕೂಡಲೇ ರದ್ದುಪಡಿಸಬೇಕು. ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್ಪಿ) ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಬಾರದು. ಈಗಾಗಲೇ ಬಳಕೆ ಮಾಡಿರುವ ಅನುದಾನವನ್ನು ಹಿಂಪಡೆದು, ದಲಿತರ ಅಭಿವೃದ್ಧಿಗೆ ಆದ್ಯತೆ ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಸಮಿತಿಯ ರಾಜ್ಯ ಘಟಕದ ಸಂಚಾಲಕ ಜೀವನಹಳ್ಳಿ ವೆಂಕಟೇಶ್, ಸಂಘಟನಾ ಸಂಚಾಲಕರಾದ ಕಲ್ಲಪ್ಪ ಕಾಂಬಳೆ, ದೇವಗಳ್ಳಿ ಸೋಮಶೇಖರ್, ಎಫ್.ವೈ. ದೊಡ್ಡಮನಿ, ಶಿವಜ್ಞಾನಿ ಕಪಗಲ್, ಶರಣಪ್ಪ ಗುಳಬಾಳ, ಸದಸ್ಯರಾದ ತರೀಕೆರೆ ನಾಗರಾಜ್, ಜಯನ್ ಮಲ್ಪೆ, ಸಿ. ಚನ್ನಪ್ಪ, ಪಿ.ಎಸ್. ಕೌಡಿಮಠ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.