ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಸ್ತಿನಲ್ಲಿದ್ದ ಪಿಎಸ್‌ಐಗೆ ಬೈಕ್ ಡಿಕ್ಕಿ: ಆರೋಪಿ ಪರಾರಿ

Published 24 ಡಿಸೆಂಬರ್ 2023, 19:44 IST
Last Updated 24 ಡಿಸೆಂಬರ್ 2023, 19:44 IST
ಅಕ್ಷರ ಗಾತ್ರ

ಬೆಂಗಳೂರು: ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಗಸ್ತಿನಲ್ಲಿದ್ದ ‍ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ವೊಬ್ಬರಿಗೆ (ಪಿಎಸ್ಐ) ಬೈಕ್‌ ಗುದ್ದಿಸಿ ಸವಾರ ಪರಾರಿಯಾಗಿದ್ದಾನೆ.

ಡಿ. 21ರಂದು ರಾತ್ರಿ ನಡೆದಿರುವ ಅಪಘಾತದಲ್ಲಿ ಪಿಎಸ್‌ಐ ಅವರ ಕಾಲಿಗೆ ತೀವ್ರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಅನ್ನಪೂರ್ಣೆಶ್ವರಿನಗರ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಪಿಎಸ್‌ಐ ಕುಬೇರ್ ಅವರು ರಾತ್ರಿ ಗಸ್ತಿನಲ್ಲಿದ್ದರು. ಮಲತ್ತಹಳ್ಳಿ ಕೆರೆ ಬಳಿಯ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಇದೇ ಸಂದರ್ಭದಲ್ಲಿ ಸವಾರ, ಅತೀ ವೇಗವಾಗಿ ಬೈಕ್‌ ಚಲಾಯಿಸಿಕೊಂಡು ಬಂದಿದ್ದ. ಪಿಎಸ್‌ಐ ಅವರಿಗೆ ಬೈಕ್‌ ಗುದ್ದಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಅಪಘಾತ ಸಂಬಂಧ ಪ್ರಕರಣ ದಾಖಲಾಗಿದೆ. ಬೈಕ್ ಸವಾರ ಯಾರು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT